ಸಂಗ್ರಹ ಚಿತ್ರ 
ದೇಶ

ಪರಿಕ್ಕರ್​ ಆರೋಗ್ಯ ಗಂಭೀರ; ಸರ್ಕಾರ ರಚನೆಗೆ ಅವಕಾಶ ಕೊಡಿ ಎಂದ ಕಾಂಗ್ರೆಸ್, ರಾಜ್ಯಪಾಲರಿಗೆ ಪತ್ರ

ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಗೋವಾದಲ್ಲಿ ಸರ್ಕಾರ ರಚನೆಗೆ ತಮಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಗೋವಾ ರಾಜ್ಯಪಾಲರಿಗೆ ಪತ್ರ ಬರೆದಿದೆ.

ನವದೆಹಲಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಗೋವಾದಲ್ಲಿ ಸರ್ಕಾರ ರಚನೆಗೆ ತಮಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಗೋವಾ ರಾಜ್ಯಪಾಲರಿಗೆ ಪತ್ರ ಬರೆದಿದೆ.
ಕಾಂಗ್ರೆಸ್ ಗೋವಾದಲ್ಲಿ ಸರ್ಕಾರ ರಚಿಸಲು ಅವಕಾಶ ನೀಡಿ ಎಂದು ರಾಜ್ಯಪಾಲೆ ಮೃದುಲಾ ಸಿನ್ಹಾ ಅವರಿಗೆ ಪತ್ರ ಬರೆದಿದೆ. ಪ್ರತಿಪಕ್ಷದ ನಾಯಕ ಚಂದ್ರಕಾಂತ್ ಕಾವ್ಲೇಕರ್ ಅವರು ಬರೆದಿರುವ ಪತ್ರದಲ್ಲಿ, 'ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರಕ್ಕೆ ಬಹುಮತವಿಲ್ಲ. ಬಿಜೆಪಿ ಸರ್ಕಾರವನ್ನು ವಜಾಗೊಳಿಸಿ ಹಾಗೂ ರಾಜ್ಯ ವಿಧಾನ ಸಭೆಯ ಅತಿ ದೊಡ್ಡ ಕಾಂಗ್ರೆಸ್ ಪಕ್ಷವನ್ನು ಸರ್ಕಾರ ರಚಿಸಲು ಅವಕಾಶ ನೀಡಿ' ಎಂದು ಬರೆದಿದ್ದಾರೆ.
'ಬಿಜೆಪಿ ಶಾಸಕ ಫ್ರಾನ್ಸಿಸ್ ಡಿ ಸೋಜಾ ನಿಧನರಾದ ನಂತರ ಪರಿಕ್ಕರ್ ನಾಯಕತ್ವದಲ್ಲಿ ಬಿಜೆಪಿ ಸರ್ಕಾರ ಜನರ ನಂಬಿಕೆಯನ್ನು ಕಳೆದುಕೊಂಡಿದ್ದಲ್ಲದೆ, ವಿಧಾನ ಸಭೆಯಲ್ಲೂ ಬಹುಮತ ಕಳೆದುಕೊಂಡಿದೆ. ಜೊತೆಗೆ ಬಿಜೆಪಿ ಸ್ಥಾನದ ಸಂಖ್ಯೆಯು ಕಡಿಮೆಯಾಗುತ್ತಿದೆ. ಹೀಗಾಗಿ ಬಿಜೆಪಿ ಪಕ್ಷಕ್ಕೆ ಅಧಿಕಾರ ಮುಂದುವರಿಸಲು ಅವಕಾಶ ಕೊಡಬಾರದು. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವನ್ನು ವಜಾ ಮಾಡಿ' ಎಂದು ಕಾವ್ಲೇಕರ್ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

'ಮಟನ್ ಹಾಕ್ತೀವಿ ಅಂತ ಹೇಳಿ ಚಿಕನ್ ಕೊಟ್ರು': ರಣಾಂಗಣವಾಯ್ತು 'ನಿಕಾಹ್ ಸಮಾರಂಭ', 12 ಮಂದಿಗೆ ಗಾಯ, Video

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!