ದೇಶ

ಗೋವಾ ಸಿಎಂ ಮನೋಹರ್ ಪರಿಕ್ಕರ್ ವಿಧಿವಶ: ರಾಷ್ಟ್ರೀಯ ಶೋಕಾಚರಣೆ; ಮಾ.18ರ ಸಂಜೆ ಪಣಜಿಯಲ್ಲಿ ಅಂತ್ಯಕ್ರಿಯೆ

Vishwanath S
ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ವಿಧಿವಶರಾಗಿದ್ದಾರೆ.
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮನೋಹರ್ ಪರಿಕ್ಕರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ವಿಧಿವಶರಾಗಿದ್ದಾರೆ.
63 ವರ್ಷದ ಪರಿಕ್ಕರ್ ಅವರು ಕಳೆದ ಒಂದು ವರ್ಷದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗಷ್ಟೇ ದೆಹಲಿಯ ಏಮ್ಸ್ ನಿಂದ ಚಿಕಿತ್ಸೆ ಪಡೆದು ವಾಪಸಾಗಿ ಸರ್ಕಾರ ನಡೆಸಿದ್ದರು. ನಿನ್ನೆ ದಿಢೀರ್ ಸುಸ್ತಾಗಿದ್ದರಿಂದ ಅವರಿಗೆ ಮತ್ತೆ ಚಿಕಿತ್ಸೆ ಮುಂದುವರೆಸಲಾಗಿತ್ತು. ಆದರೆ ದುರ್ದೈವ ವಿಧಿವಶರಾಗಿದ್ದಾರೆ.
ನಾಳೆ ಸಂಜೆ ಮನೋಹರ್ ಪರಿಕ್ಕರ್ ಅಂತ್ಯಸಂಸ್ಕಾರ 
ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ನಿಧನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಷ್ಟ್ರೀಯ ಶೋಕವನ್ನು ಘೋಷಿಸಿದೆ. ಪರಿಕ್ಕರ್ ಅವರ ಪಾರ್ಥಿವ ಶರೀರವನ್ನು ಮಾ.18 ರಂದು ಬೆಳಿಗ್ಗೆ 9:00-10:30 ವರೆಗೆ  ಗೋವಾದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುತ್ತದೆ. 

ಸಂಜೆ 4 ಗಂಟೆ ವರೆಗೆ ಪಣಜಿಯ ಕಲಾ ಅಕಾಡೆಮಿಯಲ್ಲಿ ಸಾರ್ವಜನಿಕ ದರ್ಶನದ ಬಳಿಕ ಮೆರವಣಿಗೆ ಮೂಲಕ ಪಣಜಿಯಲ್ಲಿರುವ ಎಸ್ ಎಜಿ ಗ್ರೌಂಡ್ಸ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. 
SCROLL FOR NEXT