ಗೋವಾ ಮುಖ್ಯಮಂತ್ರಿ ರೇಸ್ ನಲ್ಲಿ ಬಿಜೆಪಿಯ ಪ್ರಮೋದ್ ಸಾವಂತ್?
ಮನೋಹರ್ ಪರಿಕ್ಕರ್ ನಿಧನದ ನಂತರ ಮುಂದಿನ ಗೋವಾ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ಎದಿದ್ದು, ಆಡಳಿತಾರೂಢ ಬಿಜೆಪಿಯ ಪ್ರಮೋದ್ ಸಾವಂತ್ ಹೆಸರು ಮುಂಚೂಣಿಯಲ್ಲಿದೆ.
ಪಣಜಿ:ಮನೋಹರ್ ಪರಿಕ್ಕರ್ ನಿಧನದ ನಂತರ ಮುಂದಿನ ಗೋವಾ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ಎದಿದ್ದು, ಆಡಳಿತಾರೂಢ ಬಿಜೆಪಿಯ ಪ್ರಮೋದ್ ಸಾವಂತ್ ಹೆಸರು ಮುಂಚೂಣಿಯಲ್ಲಿದೆ.
ಕಾಂಗ್ರೆಸ್ ಸರ್ಕಾರ ರಚನೆಗೆ ಎರಡು ದಿನಗಳ ಹಿಂದೆಯೇ ಹಕ್ಕು ಮಂಡಿಸಿದ್ದು,ಬಿಜೆಪಿ ಸರ್ಕಾರವನ್ನು ಉಳಿಸುವ ನಿಟ್ಟಿನಲ್ಲಿ ಕಳೆದ ರಾತ್ರಿ ಮೈತ್ರಿ ಪಕ್ಷಗಳೊಂದಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಸಭೆ ನಡೆಸಿದ್ದಾರೆ.
ಮನೋಹರ್ ಪರಿಕ್ಕರ್ ಉತ್ತರಾಧಿಕಾರಿಯಾಗಿ ಗೋವಾ ಆಸೆಂಬ್ಲಿ ಸ್ಪೀಕರ್ ಪ್ರಮೋದ್ ಸಾವಂತ್, ಮೈತ್ರಿ ಪಕ್ಷದ ಸುದೀನ್ ದಾವಾಲಿಕರ್, ಮತ್ತು ಗೋವಾ ಪಾರ್ವಡ್ ಪಾರ್ಟಿಯ ವಿಜಯ್ ಸರ್ ದೇಸಾಯಿ ಹೆಸರು ಪ್ರಸ್ತಾಪಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಆದಾಗ್ಯೂ, ಎರಡು ಮೈತ್ರಿ ಪಕ್ಷಗಳು ಭಾರೀ ಚೌಕಾಸಿ ನಡೆಸಿದ್ದು, ಬಿಜೆಪಿ ತನ್ನ ಸ್ವಂತ ಅಭ್ಯರ್ಥಿಯನ್ನು ಮುಖ್ಯಮಂತ್ರಿ ಗಾದಿಗೆ ಕೂರಿಸಲು ಯತ್ನಿಸುತ್ತಿದೆ. ಪ್ರಮೋದ್ ಸಾವಂತ್ ಹೊರತುಪಡಿಸಿದರೆ ವಿಶ್ವಜೀತ್ ರಾಣೆ ಅವರನ್ನು ಪರಿಗಣಿಸುವ ಸಾಧ್ಯತೆ ಇದೆ. ಆದರೆ, ಮಾಜಿ ಕಾಂಗ್ರೆಸ್ ಮುಖಂಡರಿಗೆ ಅವಕಾಶ ಕಡಿಮೆ ಇದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.