ಇದೇ ಮೊದಲ ಬಾರಿಗೆ 2 ವಿಧಾನಸಭಾ ಕ್ಷೇತ್ರಗಳಿಂದ ಒಡಿಶಾ ಸಿಎಂ ಸ್ಪರ್ಧೆ!
ಒಡಿಶಾ: ಇದೇ ಮೊದಲ ಬಾರಿಗೆ ಒಡಿಶಾ ಮುಖ್ಯಮಂತ್ರಿ ಹಾಗೂ ಬಿಜೆಡಿ ಅಧ್ಯಕ್ಷ ನವೀನ್ ಪಟ್ನಾಯಕ್ 2 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದಾರೆ.
ಬಿಜೇಪುರ್ ವಿಧಾನಸಭಾ ಕ್ಷೇತ್ರ ಹಾಗೂ ಹಿಂಜಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಡಿ ಬಿಡುಗಡೆ ಮಾಡಿದೆ.
21 ಲೋಕಸಭಾ ಕ್ಷೇತ್ರಗಳ ಪೈಕಿ 9 ಕ್ಕೆ ಹಾಗೂ 147 ವಿಧಾನಸಭಾ ಕ್ಷೇತ್ರಗಳ ಪೈಕಿ 54 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹಿಂಜಲಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, 2000 ರಿಂದ ಇದೇ ಕ್ಷೇತ್ರದಿಂದ ಸತತವಾಗಿ ಆಯ್ಕೆಯಾಗುತ್ತಿದ್ದಾರೆ. ಆದರೆ ಈ ಬಾರಿ ಹಿಂಜಲಿ ಜೊತೆಗೆ ಬಿಜೇಪುರ್ ವಿಧಾನಸಭಾ ಕ್ಷೇತ್ರದಿಂದಲೂ ಸಹ ಸ್ಪರ್ಧಿಸುತ್ತಿದ್ದಾರೆ.
ಒಡಿಶಾದಲ್ಲಿ ಏ.11, 18, 23, 29 ರಂದು ಲೋಕಸಭೆ, ವಿಧಾನಸಭೆಗೆ ಮತದಾನ ನಡೆಯಲಿದೆ. ಪಶ್ಚಿಮ ಒಡಿಶಾದಲ್ಲಿ ಬಿಜೆಪಿಯ ಪ್ರಾಬಲ್ಯ ಹೆಚ್ಚುತ್ತಿರುವುದರಿಂದ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಪಶ್ಚಿಮ ಪ್ರಾಂತ್ಯಕ್ಕೆ ಒಳಪಡಲಿರುವ ಬಿಜೇಪುರ್ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ.