Modi continues to rule popularity charts despite a slight dip: IANS-CVOTER tracker poll
ನವದೆಹಲಿ: 2019 ರ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳಷ್ಟೇ ಬಾಕಿ ಇದ್ದು, ಜನಪ್ರಿಯತೆ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಈಗಲೂ ನಂ.1 ಆಗಿಯೇ ಇದ್ದಾರೆ.
ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಐಎಎನ್ಎಸ್-ಸಿ-ವೋಟರ್ ಸಮೀಕ್ಷೆಯ ವಿವರ ಬಹಿರಂಗವಾಗಿದೆ. ಈ ಸಮೀಕ್ಷೆಯ ಪ್ರಕಾರ ವೈಮಾನಿಕ ದಾಳಿಯಾದ ನಂತರವೂ ಪ್ರಧಾನಿ ಮೋದಿ ಜನಪ್ರಿಯತೆಯಲ್ಲಿ ಒಂದಷ್ಟು ಪ್ರಮಾಣ ಕಡಿಮೆಯಾಗಿದೆ. ಆದರೆ ಈಗಲೂ ಅವರೇ ಅತ್ಯಂತ ಜನಪ್ರಿಯ ನಾಯಕ.
ಇನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಜನಪ್ರಿಯತೆಯಲ್ಲಿ ಸಣ್ಣ ಪ್ರಮಾಣದ ಏರಿಕೆಯಾಗಿದೆ. ಮಾ.4,5,6 ಹಾಗೂ 7 ವರೆಗೆ ಶೇ.60 ರಷ್ಟಿದ್ದ ಮೋದಿ ಜನಪ್ರಿಯತೆ ಮಾ.14 ರ ನಂತರ ಶೇ.56 ಕ್ಕೆ ಇಳಿಕೆಯಾಗಿದೆ. ಇನ್ನು ರಾಹುಲ್ ಗಾಂಧಿ ಜನಪ್ರಿಯತೆ ಶೇ.3 ರಿಂದ ಶೇ.7 ಕ್ಕೆ ಏರಿಕೆಯಾಗಿದೆ.
ಇನ್ನು ಮೋದಿ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಜನರ ಸಂಖ್ಯೆ ಹಿಂದಿನಷ್ಟೇ ಇದ್ದು ಶೇ.50 ರಷ್ಟು ಜನರು ಮೋದಿ ಕಾರ್ಯವೈಖರಿ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನು ಬಿಜೆಪಿ ಎನ್ ಡಿಎ ಮೈತ್ರಿಕೂಟವನ್ನು ಸಮರ್ಥವಾಗಿ ಮುನ್ನಡೆಸಬಲ್ಲದು ಎಂದು ಶೇ.40 ರಷ್ಟು ಜನರು ಅಭಿಪ್ರಾಯಪಟ್ಟಿದ್ದಾರೆ. ಒಟ್ಟಾರೆ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ ನಡೆದ ಸಮೀಕ್ಷೆಯಲ್ಲೂ ಎನ್ ಡಿಎ ಮುಂದಿನ ಬಾರಿ ಅಧಿಕಾರದ ಸನಿಹಕ್ಕೆ ಬರುವ ಲಕ್ಷಣಗಳು ನಿಚ್ಚಳವಾಗಿದೆ.