ದೇಶ

ಬಿಜೆಪಿಗೆ ಅರುಣಾಚಲ ಪ್ರದೇಶದಲ್ಲಿ ಭಾರಿ ಹಿನ್ನಡೆ; 15 ಬಿಜೆಪಿ ನಾಯಕರು ಎನ್ ಪಿಪಿ ಸೇರ್ಪಡೆ!

Srinivas Rao BV
ಅರುಣಾಚಲ ಪ್ರದೇಶ: ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಅರುಣಾಚಲ ಪ್ರದೇಶದಲ್ಲಿ ಭಾರಿ ಹಿನ್ನಡೆ ಉಂಟಾಗಿದ್ದು, ಪಕ್ಷದ 15 ನಾಯಕರು ಎನ್ ಪಿಪಿ ಸೇರ್ಪಡೆಗೊಂಡಿದ್ದಾರೆ. 
ಬಿಜೆಪಿಯ ಇಬ್ಬರು ಸಚಿವರು 12 ಶಾಸಕರು ನ್ಯಾಷನಲ್ ಪೀಪಲ್ಸ್ ಪಾರ್ಟಿಗೆ ಮಾ.19 ರಂದು ಸೇರ್ಪಡೆಗೊಂಡಿದ್ದಾರೆ. ಅಸ್ಸಾಂ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಗೃಹ ಸಚಿವ ಕುಮಾರ್ ವಾಯ್, ಪ್ರವಾಸೋದ್ಯಮ ಸಚಿವ ಜರ್ಕರ್ ಗಮ್ಲಿನ್ ಸೇರಿದಂತೆ ಹಲವು ಹಾಲಿ ಸಚಿವರು ಹಾಗೂ ಶಾಸಕರಿಗೆ ಟಿಕೆಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ. 
ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಭಾನುವಾರ ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ 54 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. 
ಟಿಕೆಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಭಿನ್ನಮತೀಯ ಶಾಸಕರು, ಸಚಿವರು ಎನ್ ಪಿಪಿ ಪ್ರಧಾನ ಕಾರ್ಯದರ್ಶಿ ಥಾಮಸ್ ಸಂಗ್ಮಾ ಅವರನ್ನು ಭೇಟಿ ಮಾಡಿ, ಪಕ್ಷ ಸೇರ್ಪಡೆಗೊಂಡಿದ್ದಾರೆ.
SCROLL FOR NEXT