ನೂತನ ಗೋವಾ ಸಿಎಂ ಪ್ರಮೋದ್ ಸಾವಂತ್ 
ದೇಶ

ಮಿತ್ರ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗೋವಾ ಅಭಿವೃದ್ದಿಗೆ ಶ್ರಮಿಸುತ್ತೇನೆ: ಹೊಸ ಸಿಎಂ ಪ್ರಮೋದ್ ಸಾವಂತ್

ಮಿತ್ರ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗೋವಾ ಅಭಿವೃದ್ದಿಗೆ ಶ್ರಮಿಸುತ್ತೇನೆ ಎಂದು ಗೋವಾದ ನೂತನ ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಪಣಜಿ: ಮಿತ್ರ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗೋವಾ ಅಭಿವೃದ್ದಿಗೆ ಶ್ರಮಿಸುತ್ತೇನೆ ಎಂದು ಗೋವಾದ ನೂತನ ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಮನೋಹರ್ ಪರಿಕ್ಕರ್ ಅವರ ನಿಧನದಿಂದಾಗಿ ಗೋವಾದಲ್ಲಿ ಭುಗಿಲೆದ್ದಿದ್ದ ಸರ್ಕಾರ ರಚನೆ ಕಸರತ್ತಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಬಿಜೆಪಿ ಹೈ ಕಮಾಂಡ್ ತರಾತುರಿಯಲ್ಲಿ ಸ್ಪೀಕರ್ ಆಗಿದ್ದ ಪ್ರಮೋದ್ ಸಾವಂತ್ ರನ್ನು ಮೈತ್ರಿ ಸರ್ಕಾರದ ಸಿಎಂ ಆಗಿ ಆಯ್ಕೆ ಮಾಡಿತ್ತು. ಅದರಂತೆ ನಿನ್ನೆ ತಡರಾತ್ರಿ 2 ಗಂಟೆಯಲ್ಲಿ ಪ್ರಮೋದ್ ಸಾವಂತ್ ಗೋವಾದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಇದೀಗ ಇಂದು ಬೆಳಗ್ಗೆ ಮೊದಲ ಬಾರಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಿತ್ರ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗೋವಾದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇನೆ ಮತ್ತು ರಾಜ್ಯದ ಜನತಗೆ ಸ್ಥಿರ ಸರ್ಕಾರವನ್ನು ನೀಡುವ ಜವಾಬ್ದಾರಿ ಕೂಡ ತಮ್ಮ ಮೇಲಿದೆ. ಬಾಕಿ ಉಳಿದಿರುವ ಕಾರ್ಯಗಳನ್ನು ತಮ್ಮ ಸರ್ಕಾರ ಪೂರ್ಣಗೊಳಿಸಲಿದೆ. ಬಹುಶಃ ನಾನು ಮನೋಹರ್ ಪರಿಕ್ಕರ್ ಅವರ ಮಟ್ಟಿಕ್ಕೆ ಕೆಲಸ ಮಾಡದೇ ಇರಬಹುದು. ಆದರೆ ನನ್ನ ಶಕ್ತಿ ಮೀರಿ ಗೋವಾ ಜನತೆಗಾಗಿ ದುಡಿಯುತ್ತೇನೆ ಎಂದು ಪ್ರಮೋದ್ ಸಾವಂತ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT