ಮುಂಬಯಿ: ಮಹಾರಾಷ್ಟ್ರ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ನಷ್ಟ ಉಂಟಾಗಿದೆ, ವಿಧಾನಸಭೆ ಪ್ರತಿಪಕ್ಷ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ಮಂಗಳವಾರ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ.
ಕಳೆದ ವಾರ ತಮ್ಮ ಪುತ್ರ ಸುಜಯ್ ವಿಖೆ ಪಾಟೀಲ್ ಕಾಂಗ್ರೆಸ್ ತೊರೆದು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನಾವೀಸ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡ ನಂತರ, ರಾಧಾಕೃಷ್ಣ ಪಾಟೀಲ್ ವಿಖೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ರಾಜಿನಾಮೆ ಪತ್ರ ರವಾನಿಸಿದ್ದಾರೆ.
ತಮ್ಮ ಪುತ್ರನ ಈ ನಿರ್ಧಾರದಿಂದ ಅವರಿಗೆ ಆಘಾತ ಉಂಟಾಗಿತ್ತು. ಹೀಗಾಗಿ ಸ್ವತಃ ಪ್ರತಿಪಕ್ಷ ನಾಯಕರಾಗಿರುವ ರಾಘವೇಂದ್ರ ವಿಖೆ ರಾಜಿನಾಮೆ ಸಲ್ಲಿಸಿದ್ದಾರೆ.
ಮಹಾಘಟಬಂಧನದ ಮೂಲಕವಾದರೂ ಬಿಜೆಪಿ ಹಾಗೂ ಪ್ರಧಾನಿ ಮೋದಿ ಅವರನ್ನು ಮಣಿಸಬೇಕು ಎಂದುಕೊಂಡಿದ್ದ ಕಾಂಗ್ರೆಸ್‌ಗೆ ಲೋಕಸಭೆ ಚುನಾವಣೆಗೆ ಮುನ್ನವೇ ಆಘಾತದ ಮೇಲೆ ಆಘಾತಗಳು ಉಂಟಾಗುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics