ಪ್ರಿಯಾಂಕಾ ಗಾಂಧಿ ವಾದ್ರಾ 
ದೇಶ

ಬಿಜೆಪಿ ಐದು ವರ್ಷದಲ್ಲಿ ಏನು ಮಾಡಿದೆ: ಪ್ರಿಯಾಂಕಾ ಗಾಂಧಿ ವಾದ್ರಾ

ಗಂಗಾ ದೋಣಿ ಯಾತ್ರೆಯ ಎರಡನೇ ದಿನವಾದ ಇಂದು ಉತ್ತರ ಪ್ರದೇಶ ಪೂರ್ವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬಾದೋಲಿಯಲ್ಲಿನ ಸೀತಾ ಸಮಹಿತಾ ಸ್ಥಳದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಲಖನೌ: ಗಂಗಾ ದೋಣಿ ಯಾತ್ರೆಯ ಎರಡನೇ ದಿನವಾದ ಇಂದು  ಉತ್ತರ ಪ್ರದೇಶ ಪೂರ್ವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬಾದೋಲಿಯಲ್ಲಿನ ಸೀತಾ ಸಮಹಿತಾ ಸ್ಥಳದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿ, 70 ವರ್ಷದಿಂದ ದೇಶಕ್ಕಾಗಿ ಕಾಂಗ್ರೆಸ್ ಏನು ಮಾಡಿಲ್ಲ ಎಂದು ಟೀಕಿಸುವ ಬಿಜೆಪಿ ವಿರುದ್ಧ ಪ್ರತಿದಾಳಿ ನಡೆಸಿದರು. ಬಿಜೆಪಿ ಯಾವಾಗ ಅಧಿಕಾರಕ್ಕೆ ಬಂದಿತ್ತು, ಬಂದಾಗಿನಿಂದಲೂ ಏನೆಲ್ಲಾ ಮಾಡಿದ್ದೇ ಎಂಬುದನ್ನು ಹೇಳುವಂತೆ ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕಿಯಾಗಿರುವ ಪ್ರಿಯಾಂಕಾ ಗಾಂಧಿ ಗಂಗ ನದಿಯ ಸಂಗಮ ಕ್ಷೇತ್ರದಿಂದ ನಿನ್ನೆಯಿಂದ ಮೂರು ದಿನಗಳ ಯಾತ್ರೆ ಆರಂಭಿಸಿದ್ದಾರೆ.ಪ್ರಯಾಗ್ ರಾಜ್ ನಿಂದ ಆರಂಭಗೊಂಡಿರುವ ಈ ಪ್ರಚಾರ ವಾರಾಣಸಿಯಲ್ಲಿ ಕೊನೆಯಾಗಲಿದೆ

ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧವೂ ಮುಗಿ ಬಿದ್ದ ಪ್ರಿಯಾಂಕಾ, ರಿಪೋರ್ಟ್ ಕಾರ್ಡ್ , ಪ್ರಚಾರ, ಎಲ್ಲದರಲ್ಲೂ ಚೆನ್ನಾಗಿದೆ ಎಂದು ತೋರಿಸಲಾಗುತ್ತಿದೆ. ಆದರೆ, ವಾಸ್ತವಿಕವಾಗಿ ಏನೂ ಆಗಿಲ್ಲ, ನಾನು ಪ್ರತಿದಿನ ಭೇಟಿ ಮಾಡುತ್ತಿರುವ ಜನರೆಲ್ಲರೂ ಒತ್ತಡದಲ್ಲಿಯೇ ಬದುಕು ಸಾಗಿಸುತ್ತಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?