ಯೋಗಿ ಆದಿತ್ಯನಾಥ್ 
ದೇಶ

ನನ್ನ ಸರ್ಕಾರದ ಆಡಳಿತಾವಧಿ ಉತ್ತರ ಪ್ರದೇಶದಲ್ಲಿ ಒಂದೇ ಒಂದು ಗಲಭೆ ನಡೆದಿಲ್ಲ: ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೇ ಒಂದು ಗಲಭೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಿಪೋರ್ಟ್ ಕಾರ್ಡ್ ನೀಡಿದ್ದಾರೆ

ಲಖನೌ: ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೇ ಒಂದು ಗಲಭೆ ಉಂಟಾಗಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ರಿಪೋರ್ಟ್ ಕಾರ್ಡ್ ನೀಡಿದ್ದು, ಹಿಂದಿನ ಸರ್ಕಾರ ಇದ್ದಾಗ ಹಿಂದೂಗಳನ್ನು ಬಲವಂತವಾಗಿ ಬೇರೆ ಕಡೆಗೆ ವಲಸೆ ಹೋಗುವಂತೆ  ಮಾಡಲಾಗುತಿತ್ತು ಎಂದು ಆರೋಪಿಸಿದ್ದಾರೆ.

ಎರಡು ವರ್ಷಗಳ ತಮ್ಮ ಸರ್ಕಾರದ ಸಾಧನೆಗಳ ವರದಿಯನ್ನು ಮಂಡಿಸಿದ ಯೋಗಿ ಆದಿತ್ಯನಾಥ್,  2012ರಲ್ಲಿ 227, 2013ರಲ್ಲಿ 247, 2014 ರಲ್ಲಿ 242, 2015ರಲ್ಲಿ 219 ಹಾಗೂ 2016ರಲ್ಲಿ 100 ಹಿಂಸಾಚಾರಗಳು ನಡೆದಿದ್ದವು.
ಆದರೆ, ಕಳೆದ 24 ತಿಂಗಳ ಕಾಲದ ಬಿಜೆಪಿ ಆಡಳಿತಾವಧಿಯಲ್ಲಿ ಒಂದೇ ಒಂದು ಗಲಭೆ ನಡೆದಿಲ್ಲ ಎಂದು ತಿಳಿಸಿದರು. ಹಿಂದಿನ ಸರ್ಕಾರದ ಅವಧಿಯಲ್ಲಿ ಹಿಂಸಾಚಾರದಲ್ಲಿ ತೊಡಗಿಸಿಕೊಂಡಿದ್ದ ಸಮಾಜ ವಿರೋಧಿಗಳಿಗೆ ಪ್ರೋತ್ಸಾಹ ನೀಡಲಾಗುತಿತ್ತು ಎಂದು ಅವರು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT