ಲಖನೌ: ಪಕ್ಷದ ಕಚೇರಿಯಲ್ಲಿ ಹೋಳಿ ಆಚರಿಸುತ್ತಿದ್ದ ವೇಳೆ ಉತ್ತರ ಪ್ರದೇಶದ ಲಕಿಂಪುರ್ ಕ್ಷೇತ್ರದ ಬಿಜೆಪಿ ಶಾಸಕ ಯೋಗೇಶ್ ವರ್ಮಾ ಅವರ ಮೇಲೆ ಗುರುವಾರ ಗುಂಡಿನ ದಾಳಿ ನಡೆದಿದ್ದು, ಗಾಯಗೊಂಡ ಶಾಸಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಲಕಿಂಪುರ್ ಬಿಜೆಪಿ ಕಚೇರಿಯಲ್ಲಿ ಹೋಳಿ ಆಚರಿಸುತ್ತಿದ್ದ ಶಾಸಕರ ಹಾಗೂ ಕಾರ್ಯಕರ್ತರ ನಡುವ ತೀವ್ರಾ ವಾಗ್ವಾದ ನಡೆದಿದೆ. ಈ ವೇಳೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದು, ಅದು ಶಾಸಕರ ಕಾಲಿಗೆ ತಗುಲಿದೆ. ಶಾಸಕರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ಅಪಾಯ ಇಲ್ಲ ಎಂದು ಲಕಿಂಪುರ್ ಜಿಲ್ಲಾಧಿಕಾರಿ ಎಸ್ ಸಿಂಗ್ ಅವರು ತಿಳಿಸಿದ್ದಾರೆ.
ಯೋಗೇಶ್ ವರ್ಮಾ ಅವರು ತಮ್ಮ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳ ಜತೆ ಹೋಳಿ ಹಬ್ಬವನ್ನು ಆಚರಿಸುತ್ತಿದ್ದರು. ಪರಸ್ಪರ ಬಣ್ಣ ಎರಚಿಕೊಂಡು ಸಂಭ್ರಮಿಸುತ್ತಿದ್ದರು. ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಗುಂಡಿನ ದಾಳಿ ಮಾಡಿದ್ದಾನೆ. ಗುಂಪು ದೊಡ್ಡದಾಗಿದ್ದರಿಂದ, ದಾಳಿ ಮಾಡಿದವರು ಯಾರು ಎಂಬುದು ತಕ್ಷಣವೇ ಗೊತ್ತಾಗಿಲ್ಲ. ಈ ಕುರಿತು ತನಿಖೆ ನಡೆಸುತ್ತಿರುವುದಾಗಿ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics