ಬಾರಮುಲ್ಲಾದಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ಹಾಗೂ ಸೇನಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.
ಬಾರಾಮುಲ್ಲಾ: ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ಹಾಗೂ ಸೇನಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.
ಘಟನೆಯಲ್ಲಿ ಓರ್ವ ಸೇನಾಧಿಕಾರಿ ಸೇರಿದಂತೆ ಮೂವರು ಸೇನಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ ಎಂದು ಶ್ರೀನಗರದ ರಕ್ಷಣಾ ವಿಭಾಗದ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ಮಾಹಿತಿ ನೀಡಿದ್ದಾರೆ.
ಉಗ್ರರ ಅಡಗುದಾಣಗಳ ಬಗ್ಗೆ ಖಚಿತ ಮಾಹಿತಿ ಪಡೆದು ಸೇನಾಧಿಕಾರಿಗಳು ದಾಳಿ ನಡೆಸಿದ್ದಾರೆ. ಸೇನೆಯಿಂದ ಎನ್ ಕೌಂಟರ್ ಮುಂದುವರೆದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.