ಲಖನೌ: ಲೋಕಸಭೆ ಚುನಾವಣೆಗೆ ಬಹುಜನ ಸಮಾಜ ಪಕ್ಷ(ಬಿಎಸ್ ಪಿ) ಶುಕ್ರವಾರ 11 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇತ್ತೀಚಿಗಷ್ಟೇ ಜೆಡಿಎಸ್ ತೊರೆದು ಬಿಎಸ್ಪಿ ಸೇರಿದ್ದ ಡ್ಯಾನಿಶ್ ಅಲಿ ಅವರಿಗೆ ಅಮ್ರೊಹದಿಂದ ಟಿಕೆಟ್ ನೀಡಲಾಗಿದೆ.
ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಡ್ಯಾನಿಶ್ ಅಲಿ ಅವರು ಕಳೆದ ವಾರ ಬಿಎಸ್ಪಿ ಸೇರಿದ್ದರು.
ಉತ್ತರ ಪ್ರದೇಶದಲ್ಲಿ ಮಾಯಾವತಿ ನೇತೃತ್ವದ ಬಿಎಸ್ಪಿ, ಸಮಾಜವಾದಿ ಪಕ್ಷ ಹಾಗೂ ರಾಷ್ಟ್ರೀಯ ಲೋಕದಳದೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ರಾಜ್ಯದ 80 ಲೋಕಸಭಾ ಕ್ಷೇತ್ರಗಳ ಪೈಕಿ 38 ಕ್ಷೇತ್ರಗಳಲ್ಲಿ ಬಿಎಸ್ಪಿ ಸ್ಪರ್ಧಿಸುತ್ತಿದೆ.