'ಪಾಕ್ ರಾಷ್ಟ್ರೀಯ ದಿನಾಚರಣೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ'
ಇಸ್ಲಾಮಾಬಾದ್: ಪಾಕಿಸ್ತಾನ ರಾಷ್ಟ್ರೀಯ ದಿನಾಚರಣೆ ಮಾ.23 ರಂದು ನಡೆಯಲಿದ್ದು, ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಶುಭಾಶಯ ಕೋರಿದ್ದಾರಂತೆ.
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್, ಈ ವಿಷಯ ಬಹಿರಂಗಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ರಾಷ್ಟ್ರೀಯ ದಿನಾಚರಣೆಯ ಶುಭಾಶಯ ಕೋರಿದ್ದಾರೆ ಎಂದು ತಿಳಿಸಿದ್ದಾರೆ.
" ಪಾಕಿಸ್ತಾನದ ಜನತೆಗೆ ರಾಷ್ಟ್ರೀಯ ದಿನಾಚರಣೆಯ ಶುಭಾಶಯ ತಿಳಿಸುತ್ತೇನೆ, ಉಪಖಂಡ ಜನತೆ ತಮ್ಮ ಪ್ರದೇಶದ ಶಾಂತಿ, ಅಭಿವೃದ್ಧಿ ಹಾಗೂ ಸಂವೃದ್ಧಿಗೆ ಭಯೋತ್ಪಾದನೆ ಹಾಗೂ ಹಿಂಸಾಚಾರ ಮುಕ್ತ ವಾತಾವರಣದಲ್ಲಿ ಒಟ್ಟಿಗೆ ಕೆಲಸ ಮಾಡುವ ಸಮಯ ಇದು" ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಪಾಕಿಸ್ತಾನದ ರಾಷ್ಟ್ರೀಯ ದಿನಾಚರಣೆ ಸಮಾರಂಭಗಳನ್ನು ಬಹಿಷ್ಕರಿಸಲು ಹಾಗೂ ಪ್ರತಿನಿಧಿಗಳನ್ನು ಕಳಿಸದೇ ಇರಲು ಕೇಂದ್ರ ಸರ್ಕಾರ ನಿರ್ಧರಿಸಿದ ಬೆನ್ನಲ್ಲೇ ಪಾಕಿಸ್ತಾನದ ರಾಷ್ಟ್ರೀಯ ದಿನಾಚರಣೆಗೆ ಪ್ರಧಾನಿ ಮೋದಿ ಶುಭಾಶಯ ಸಂದೇಶ ರವಾನೆ ಮಾಡಿದ್ದಾರೆ.