ಬಾಲಕನ ಕತ್ತು ಸೀಳಿದ್ದ 2 ಲಷ್ಕರ್ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ 
ದೇಶ

ಬಾಲಕನ ಕತ್ತು ಸೀಳಿದ್ದ 2 ಲಷ್ಕರ್ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಸೇನಾಪಡೆಗಳಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಒತ್ತೆಯಾಳಾಗಿಟ್ಟುಕೊಂಡಿದ್ದ ಬಾಲಕನನ್ನು ಕತ್ತು ಸೀಳಿ ಹತ್ಯೆ ಮಾಡಿದ್ದ ಲಷ್ಕರ್ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ನವದೆಹಲಿ: ಸೇನಾಪಡೆಗಳಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಒತ್ತೆಯಾಳಾಗಿಟ್ಟುಕೊಂಡಿದ್ದ ಬಾಲಕನನ್ನು ಕತ್ತು ಸೀಳಿ ಹತ್ಯೆ ಮಾಡಿದ್ದ ಲಷ್ಕರ್ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. 
ಬಂಡೀಪೋರಾದ ಹಜಿನ್ ಪ್ರದೇಶದಲ್ಲಿ 12 ವರ್ಷದ ಬಾಲಕನನ್ನು ಅತೀಫ್ ಮಿರ್ ನ್ನು ಕತ್ತು ಸೀಳಿ ಲಷ್ಕರ್ ಉಗ್ರರು ಹತ್ಯೆ ಮಾಡಿದ್ದರು.  ಅತೀಫ್ ಮಿರ್ ನ್ನು ಬಿಡುಗಡೆ ಮಾಡುವಂತೆ ಕುಟುಂಬ ಸದಸ್ಯರು ನಿರಂತರವಾಗಿ ಉಗ್ರರಿಗೆ ಮನವಿ ಮಾಡಿದ್ದರು. 
ಭಯೋತ್ಪಾದಕರು ಬಾಲಕನ ಸಹೋದರಿಗೆ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದರು. ಆದರೆ ಕುಟುಂಬ ಸದಸ್ಯರು ಆಕೆ ತಪ್ಪಿಸಿಕೊಳ್ಳುವುದಕ್ಕೆ ಸಹಕರಿಸಿದ್ದರು. ಇದರಿಂದ ಆಕ್ರೋಶಗೊಂಡ ಭಯೋತ್ಪಾದಕರು ಬಾಲಕನ ಮನೆಯವರ ಮೇಲೆ ಹಲ್ಲೆ ನಡೆಸಿದ್ದೂ ಅಲ್ಲದೇ ಬೆದರಿಕೆ ಹಾಕಿ ಮನೆಯಲ್ಲಿ ಆಶ್ರಯ ಪಡೆದು ಬಾಲಕನನ್ನು ಒತ್ತೆಯಾಳಾಗಿರಿಸಿಕೊಂಡಿದ್ದರು. ಕುಟುಂಬ ಸದಸ್ಯರ ಕೂಗನ್ನು ಕೇಳಿಸಿಕೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಕುಟುಂಬ ಸದಸ್ಯರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಭಯೋತ್ಪಾದಕರು ಪೊಲೀಸರು ಹಾಗೂ ಭದ್ರತಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಪ್ರಾರಂಭಿಸಿದ್ದಾರೆ.
ಭದ್ರತಾ ಪಡೆಗಳು ಉಗ್ರರನ್ನು ಎನ್ ಕೌಂಟರ್ ಮಾಡುವಲ್ಲಿ ಯಶಸ್ವಿಯಾಗಿದ್ದು, ಎನ್ ಕೌಂಟರ್ ನಲ್ಲಿ ಹತ್ಯೆಯಾದ ಉಗ್ರರನ್ನು ಪಾಕಿಸ್ತಾನದ ಅಲಿ ಹಾಗೂ ಹುಬಾಯಿಬ್ ಎಂದು ಗುರುತಿಸಲಾಗಿದೆ.    

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)