ದೇಶ

ದೆಹಲಿ ಪ್ರತಿಭಟನೆ ನಂತರ ವಾರಣಾಸಿಯಲ್ಲಿ ಮೋದಿ ವಿರುದ್ಧ 111 ತಮಿಳುನಾಡು ರೈತರು ಸ್ಪರ್ಧೆ

Lingaraj Badiger
ತಿರುಚಿರಾಪಳ್ಳಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅರೆ ಬೆತ್ತಲೆಯಾಗಿ ಹಾಗೂ ತಲೆಬುರುಡೆಗಳನ್ನು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ದೇಶದ ಗಮನ ಸೆಳೆದಿದ್ದ ತಮಿಳುನಾಡು ರೈತರು ಈಗ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ವಾರಣಾಸಿಯಲ್ಲಿ ಮೋದಿ ವಿರುದ್ಧ ರಾಜ್ಯದ 111 ರೈತರು ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಮಿಳುನಾಡು ರೈತರ ನಾಯಕ ಪಿ ಅಯ್ಯಕಣ್ಣು ಅವರು ಹೇಳಿದ್ದಾರೆ.
ಸಾಲ ಮನ್ನಾ ಹಾಗೂ ರೈತರ ಬೆಳಗೆ ಬೆಂಬಲ ಬೆಲೆ ಸೇರಿದಂತೆ ತಮ್ಮ ವಿವಿಧಿ ಬೇಡಿಕೆಗಳನ್ನು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಕಟಿಸಬೇಕು ಎಂದು ಒತ್ತಾಯಿಸುವುದಕ್ಕಾಗಿ ನಾವು ಚುನಾವಣೆಗೆ ಸ್ಪರ್ಧಿಸುವ ನಿರ್ಧಾರಕ್ಕೆ ಬಂದಿದ್ದೇವೆ ಎಂದು ದಕ್ಷಿಣ ಭಾರತ ನದಿ ಜೋಡಣೆ ರೈತರ ಸಂಘದ ಅಧ್ಯಕ್ಷರಾಗಿರುವ ಅಯ್ಯಕಣ್ಣು ಅವರು ತಿಳಿಸಿದ್ದಾರೆ.
ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ನಮ್ಮ ಬೇಡಿಕೆಗಳನ್ನು ಪ್ರಕಟಿಸುವ ಭರವಸೆ ನೀಡಿದರೆ ನಾವು ಮೋದಿ ವಿರುದ್ಧ ಸ್ಪರ್ಧಿಸುವ ನಿರ್ಧಾವನ್ನು ಹಿಂಪಡೆಯುತ್ತೇವೆ. ಇಲ್ಲದಿದ್ದರೆ ಪ್ರಧಾನಿ ವಿರುದ್ಧ ಹೋರಾಟಕ್ಕಿಳಿಯುವುದು ಖಚಿತ ಎಂದು ಅಯ್ಯಕಣ್ಣ ಅವರು ಪಿಟಿಐಗೆ ತಿಳಿಸಿದ್ದಾರೆ.
ದೇಶದ ಎಲ್ಲಾ ರೈತರಿಗೂ ಮತ್ತು ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿಗೆ ಬೆಂಬಲ ನೀಡುವುದಕ್ಕಾಗಿ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ಹೇಳಿದ್ದಾರೆ.
SCROLL FOR NEXT