ಅಸಾದುದ್ದೀನ್ ಓವೈಸಿ, ನರೇಂದ್ರ ಮೋದಿ 
ದೇಶ

ಪುಲ್ವಾಮಾದಲ್ಲಿ ಆತ್ಮಾಹುತಿ ಉಗ್ರ ದಾಳಿ ನಡೆದಾಗ ದನದ ಬಿರಿಯಾನಿ ತಿಂದು ಮಲಗಿದ್ರಾ; ಮೋದಿ ವಿರುದ್ಧ ಓವೈಸಿ ಗುಡುಗು!

ಪುಲ್ವಾಮಾದಲ್ಲಿ ನಡೆದ ಉಗ್ರ ದಾಳಿಯಲ್ಲಿ 40 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದು ಈ ವೇಳೆ ನೀವೂ ದನದ ಬಿರಿಯಾನಿ ತಿಂದು ಮಲಗಿದ್ರಾ ಎಂದು...

ಹೈದರಾಬಾದ್: ಪುಲ್ವಾಮಾದಲ್ಲಿ ನಡೆದ ಉಗ್ರ ದಾಳಿಯಲ್ಲಿ 40 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದು ಈ ವೇಳೆ ನೀವೂ ದನದ ಬಿರಿಯಾನಿ ತಿಂದು ಮಲಗಿದ್ರಾ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಗುಡುಗಿದ್ದಾರೆ.
ಲೋಕಸಭೆ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಓವೈಸಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ, ಬಾಲಾಕೋಟ್ ನಲ್ಲಿ ಭಾರತೀಯ ವಾಯುಸೇನೆ ಬಾಂಬ್ ಹಾಕಿ ಬಂದಿದ್ದು 250 ಜನ ಮೃತಪಟ್ಟಿದ್ದಾರೆ ಎಂದು ಶಾ ಹೇಳಿಕೆ ನೀಡಿದ್ದರೆ, 300 ಫೋನ್ ಗಳನ್ನು ಎನ್ ಟಿಆರ್ ಓ ಟ್ಯಾಪ್ ಮಾಡಿದೆ ಅಂತ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಬಾಲಾಕೋಟ್ ನಲ್ಲಿರುವ 300 ಪೋನ್ ಗಳನ್ನು ಪತ್ತೆ ಹಚ್ಚುತ್ತೀರಿ. ಆದರೆ ನಿಮ್ಮ ಕಾಶ್ಮೀರದಲ್ಲಿರುವ ಪುಲ್ವಾಮಾಗೆ 50 ಕೆಜಿ ಆರ್ ಡಿಎಕ್ಸ್ ಬಾಂಬ್ ಸಾಗಿಸಿದ್ದು ನಿಮಗೆ ಗೊತ್ತೆ ಆಗ್ಲಿಲ್ವಾ ಎಂದು ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.
ಭಾರತೀಯ ಯೋಧರ ಮೇಲೆ ಬಾಂಬ್ ದಾಳಿ ನಡೆದಾಗ ಪ್ರಧಾನಿ ಮೋದಿ, ಗೃಹ ಸಚಿವ ರಾಜನಾಥ್ ಸಿಂಗ್ ಬೀಫ್ ಬಿರಿಯಾನಿ ತಿಂದು ಮಲಗಿದ್ದರೆ ಎಂದು ಓವೈಸಿ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT