ಸಂಗ್ರಹ ಚಿತ್ರ 
ದೇಶ

ಮತ್ತೆ ಪಾಕ್ ಸೇನೆಯ ಉದ್ಧಟತನ: ಪೂಂಛ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘನೆ, ಓರ್ವ ಸೈನಿಕ ಹುತಾತ್ಮ

ಗಡಿ ನಿಯಂತ್ರಣ ರೇಖೆಯಲ್ಲಿ ಮತ್ತೆ ಪಾಕಿಸ್ತಾನ ಸೇನೆ ಉದ್ಧಟತನ ತೋರಿದ್ದು, ಪೂಂಛ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದೆ. ಪರಿಣಾಮ ಭಾರತೀಯ ಸೇನೆ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀನಗರ: ಗಡಿ ನಿಯಂತ್ರಣ ರೇಖೆಯಲ್ಲಿ ಮತ್ತೆ ಪಾಕಿಸ್ತಾನ ಸೇನೆ ಉದ್ಧಟತನ ತೋರಿದ್ದು, ಪೂಂಛ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದೆ. ಪರಿಣಾಮ ಭಾರತೀಯ ಸೇನೆ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾಶ್ಮೀರದ ಪೂಂಛ್ ಸೆಕ್ಟರ್ ನಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದೆ. ಗಡಿಯಲ್ಲಿ ತೀವ್ರ ಪ್ರಮಾಣದಲ್ಲಿ ಶೆಲ್ಲಿಂಗ್ ದಾಳಿಯಾಗುತ್ತಿದ್ದು, ಪಾಕ್ ಸೇನೆಗೆ ಭಾರತೀಯ ಸೇನೆಯ ಸೈನಿಕರೂ ಕೂಡ ದಿಟ್ಟ ಉತ್ತರ ನೀಡುತ್ತಿದ್ದಾರೆ. ರಜೌರಿ ಜಿಲ್ಲೆಯಲ್ಲೂ ತೀವ್ರ ಗುಂಡಿನ ಚಕಮಕಿ ನಡೆಯುತ್ತಿದ್ದು, ಪಾಕಿಸ್ತಾನದ ಶೆಲ್ ದಾಳಿಗೆ ಇಲ್ಲಿನ ಹಲವು ಗ್ರಾಮಗಳಲ್ಲಿನ ಮನೆಗಳಿಗೆ ಹಾನಿಯಾಗಿದೆ.
ಇನ್ನು ಕಳೆದ ಫೆಬ್ರವರಿ 26 ಭಾರತೀಯ ವಾಯುಸೇನೆಯ ವಾಯುದಾಳಿ ಬಳಿಕ ಗಡಿಯಲ್ಲಿ ತೀವ್ರ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಇದಕ್ಕೆ ಸೇನೆ ಕೂಡ ಪ್ರತಿದಾಳಿ ನಡೆಸಿದ್ದು, ನಿನ್ನೆ ಭಾರತೀಯ ಸೈನಿಕರ ಪ್ರತಿದಾಳಿಯಲ್ಲಿ ಪಾಕಿಸ್ತಾನದ 12 ಮಂದಿ ಸೈನಿಕರು ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT