ದೇಶ

ಅಖಿಲೇಶ್, ಮುಲಾಯಂ ವಿರುದ್ಧದ ತನಿಖೆ: ಸಿಬಿಐ ಗೆ ಸುಪ್ರೀಂ ಕೋರ್ಟ್ ನೊಟೀಸ್

Srinivas Rao BV
ನವದೆಹಲಿ: ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್, ಎಸ್ ಪಿ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸಿಬಿಐ ಗೆ ನೊಟೀಸ್ ಜಾರಿ ಮಾಡಿದೆ. 
ತನಿಖೆಯ ಸ್ಥಿತಿಗತಿಗಳ ಬಗ್ಗೆ ಎರಡು ವಾರಗಳಲ್ಲಿ ಮಾಹಿತಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಸಿಬಿಐ ಗೆ ಸೂಚನೆ ನೀಡಿದೆ. ಕಾಂಗ್ರೆಸ್ ನಾಯಕ ವಿಶ್ವನಾಥ್ ಚತುರ್ವೇದಿ ಮುಲಾಯಂ ಸಿಂಗ್ ಯಾದವ್ ಹಾಗೂ ಪುತ್ರರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸ್ಥಿತಿಗತಿಗಳ ವರದಿಯನ್ನು ನೀಡಬೇಕೆಂದು ಸಿಬಿಐ ಗೆ ನಿರ್ದೇಶನ ನೀಡಲು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
SCROLL FOR NEXT