ಅರುಣಾಚಲ ಪ್ರದೇಶ ಚುನಾವಣೆ:2 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆ!
ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದ ಇಬ್ಬರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಹೇಳಿದೆ.
ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಅರುಣಾಚಲಪ್ರದೇಶದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಯಾರೂ ಸ್ಪರ್ಧಿಸದೇ ಇರುವ ಹಿನ್ನೆಲೆಯಲ್ಲಿ ನಮ್ಮ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಹೇಳಿದ್ದಾರೆ. ಅಲೊ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ವಿರುದ್ಧ ಯಾರೂ ಸಹ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಇನ್ನು ಮತ್ತೊಂದು ವಿಧಾನಸಭಾ ಕ್ಷೇತ್ರವಾಗಿರುವ ಯಚುಲಿಯಿಂದ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 60 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಅರುಣಾಚಲ ಪ್ರದೇಶದ ವಿಧಾನಸಭೆಗೆ ಏ.11 ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಜೊತೆಯಲ್ಲೇ 2 ಲೋಕಸಭಾ ಕ್ಷೇತ್ರಗಳಿಗೂ ಚುನಾವಣೆ ನಡೆಯಲಿದೆ.
2009 ರಲ್ಲಿಯೂ ಕಾಂಗ್ರೆಸ್ ನ ಇಬ್ಬರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics