ನರೇಂದ್ರ ಮೋದಿ 
ದೇಶ

ವಿಜ್ಞಾನಿಗಳ ಸಾಧನೆ ಕುರಿತ ಮೋದಿ ಭಾಷಣ: ನೀತಿ ಸಂಹಿತೆ ಉಲ್ಲಂಘನೆ ತನಿಖೆಗೆ ಮುಂದಾದ ಆಯೋಗ

ಪ್ರಧಾನಿ ನರೇಂದ್ರ ಮೋದಿ ಭಾರತದ ಬಾಹ್ಯಾಕಾಶ ವಿಜ್ಞಾನಿಗಳ ಸಾಧನೆ ಕುರಿತಂತೆ ಬುಧವಾರ ಬೆಳಿಗ್ಗೆ ಮಾಡಿದ್ದ ಭಾಷಣ ಪ್ರಸಕ್ತ ಜಾರಿಯಲ್ಲಿರಿವ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಲಿದೆಯೆ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದ ಬಾಹ್ಯಾಕಾಶ ವಿಜ್ಞಾನಿಗಳ ಸಾಧನೆ ಕುರಿತಂತೆ ಬುಧವಾರ ಬೆಳಿಗ್ಗೆ ಮಾಡಿದ್ದ ಭಾಷಣ ಪ್ರಸಕ್ತ ಜಾರಿಯಲ್ಲಿರಿವ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಲಿದೆಯೆ? ಇದನ್ನು ತೀರ್ಮಾನಿಸಲು ಚುನಾವಣಾ ಆಯೋಗದ ನೇತೃತ್ವದಲ್ಲಿ ಉಪಸಮಿತಿಯೊಂದು ರಚನೆಯಾಗಿದೆ.
ಮದರಿ ನೀತಿ ಸಂಹಿತೆಯಡಿಯಲ್ಲಿ ತಕ್ಷಣ ವಿಷಯವನ್ನು ಪರಿಶೀಲಿಸಬೇಕೆಂದು ಆಯೋಗವು ಸಮಿತಿಯ ಅಧಿಕಾರಿಗಳಿಗೆ ನಿರ್ದೇಶಿಸಿದೆ.
ಹಾಗಿದ್ದರೂ ಸಹ ರಾಷ್ಟ್ರೀಯ ಭದ್ರತೆ,  ಮತ್ತು ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ವಿಚಾರಗಳು ಮಾದರಿ ನೀತಿ ಸಂಹಿತೆಯ ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ಕೆಲ ನುರಿತ ಚಿಂತಕರು ಅಭಿಪ್ರಾಯಪಟ್ಟಿದ್ದಾರೆ.
ದೇಶದಲ್ಲಿ ಮಾರ್ಚ್ 10ರಂದು ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟವಾದಂದಿನಿಂದ ನೀತಿ ಸಂಹಿತೆ ಜಾರಿಯಲ್ಲಿದೆ. ಏಪ್ರಿಲ್ 11ರಿಂದ ಏಳು ಹಂತಗಳಲ್ಲಿ ಭಾರತದ ಸಂಸತ್ತಿಗೆ ಚುನಾವಣೆ ನಡೆಯಲಿದ್ದು ಮೇ 23ಕ್ಕೆ ಫಲಿತಾಂಶ ಘೋಷಣೆಯಾಗಲಿದೆ.
ಸರ್ಕಾರದ "ಸಾಧನೆ" ಯನ್ನು ಹೈಲೈಟ್ ಮಾಡಿದ ಕಾರಣ ಪ್ರಧಾನಮಂತ್ರಿಯ ಭಾಷಣ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ವಿಪಕ್ಷಗಳು ಆರೋಪಿಸಿದೆ. ಅಲ್ಲದೆ ಭಾಷಣದಲ್ಲಿನ ವಿಚಾರವು ರಾಷ್ಟ್ರೀಯ ಭದ್ರತೆಗೆ ನೇರವಾಗಿ ಸಂಬಂಧಿಸಿಲ್ಲ ಎಂದೂ ಅವು ವಾದಿಸಿದೆ.
ಸಮಿತಿಗೆ ವರದಿ ನೀಡಲು ಅಂತಿಮ ಗಡುವನ್ನೇನೂ ನೀಡಿಲ್ಲವಾಗಿಯೂ ಅತಿ ಶೀಘ್ರವಾಗಿ ತನಿಖೆ ಪೂರ್ಣಗೊಳ್ಳಬೇಕು ಎಂದು ಮೂಲಗಳು ತಿಳಿಸಿದೆ.
ಬುಧವಾರ ಬೆಳಿಗ್ಗೆ ಭದ್ರತಾ ಸಲಹೆಗಾರರ ಕ್ಯಾಬಿನಟ್ ಸಭೆ ಬಳಿಕ ಪ್ರಧಾನಮಂತ್ರಿಯವರು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದರು.  'ನಮ್ಮ ವಿಜ್ಞಾನಿಗಳು ಬಾಹ್ಯಾಕಾಶದಲ್ಲಿ 300 ಕಿ.ಮೀ ದೂರ (ಎಲ್‌ಇಓ) (ಲೋ ಅರ್ಥ್ ಆರ್ಬಿಟ್)ದಲ್ಲಿರುವ  ಸಕ್ರಿಯ ಉಪಗ್ರಹವನ್ನು ಹೊಡೆದುರುಳಿಸಿದ್ದಾರೆ. ಕೇವಲ 3 ನಿಮಿಷಗಳಲ್ಲಿ ಯಶಸ್ವಿಯಾಗಿ ಈ ಕಾರ್ಯಾಚರಣೆಯನ್ನು ವಿಜ್ಞಾನಿಗಳು ಯಶಸ್ವಿಗೊಳಿಸಿದ್ದಾರೆ. ಮಿಷನ್ ಶಕ್ತಿ ಎಂಬ ಅತ್ಯಂತ ಕಠಿಣ ಕಾರ್ಯಾಚರಣೆ ಇದಾಗಿತ್ತು. ಅತ್ಯಂತ ಹೆಚ್ಚು ವೆಚ್ಚ ಬಯಸುವ ಈ ಕಾರ್ಯಾಚರಣೆಯನ್ನು ಅತಿ ಕಡಿಮೆ ವೆಚ್ದದಲ್ಲಿ ನಮ್ಮ ವಿಜ್ಞಾನಿಗಳು ಈ ಸಾಧನೆ ಮಾಡಿದ್ದಾರೆ'. ಎಂದು ಅವರು ಹೇಳೀದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ