ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರ ಹತ್ಯೆ, ಐವರು ಸೈನಿಕರಿಗೆ ಗಾಯ

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಇಂದು ನಡೆದ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವಿನ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ.

ಸಾಂದರ್ಭಿಕ ಚಿತ್ರ
Nagaraja AB
Updated On : 29 Mar 2019, 12:36 pm

ಶ್ರೀನಗರ: ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಇಂದು ನಡೆದ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವಿನ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ.

ಶ್ರೀನಗರದ ಹೊರವಲಯ ನೌಗಾಮ್ ನಲ್ಲಿ ನಡೆದ  ಎನ್  ಕೌಂಟರ್ ನಲ್ಲಿ ಈ ಉಗ್ರರನ್ನು ಹತ್ಯೆ ಮಾಡಿರುವುದಾಗಿ ರಕ್ಷಣಾ ಸಚಿವಾಲಯದ ವಕ್ತಾರ ಕಾಲೊನೆಲ್  ರಾಜೇಶ್  ಕಾಲಿಯಾ ತಿಳಿಸಿದ್ದಾರೆ.

ಎನ್ ಕೌಂಟರ್ ಕಾರ್ಯಾಚರಣೆ ಅಂತ್ಯಗೊಂಡಿದ್ದು, ಐವರು ಭಾರತೀಯ ಸೈನಿಕರು ಗಾಯಗೊಂಡಿದ್ದಾರೆ. ಉಗ್ರರಿಂದ ಎರಡು ರೈಫಲ್ಸ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದಾಗ್ಯೂ, ಅವರ ಗುರುತನ್ನು ಇನ್ನೂ ಪತ್ತೆಹಚ್ಚಲು ಆಗಿಲ್ಲ ಎಂದು ಕಾಲಿಯಾ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement