ದೇಶ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಂಧ್ರಕ್ಕೆ ವಿಶೇಷ ಸ್ಥಾನಮಾನ: ರಾಹುಲ್ ಗಾಂಧಿ ಭರವಸೆ

Srinivas Rao BV
ವಿಜಯವಾಡ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ. 
ಮಾ.31 ರಂದು ಆಂಧ್ರಪ್ರದೇಶದಲ್ಲಿ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿರುವ ರಾಹುಲ್ ಗಾಂಧಿ ರಾಜ್ಯದಲ್ಲಿರುವ ಪಕ್ಷಗಳು ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಷಯದ ಬಗ್ಗೆ ಒತ್ತಡ ಹೇರುವುದಕ್ಕೆ ವಿಫಲವಾಗಿರುವುದಕ್ಕೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. 
ತಮ್ಮ ಪಕ್ಷ ಬಡತನದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮಾಡುತ್ತದೆ ಎಂದು ಭರವಸೆ ನೀಡಿರುವ ರಾಹುಲ್ ಗಾಂಧಿ, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಬಡತನ ನಿರ್ಮೂಲನೆಗೆ ಯೋಜನೆಗಳನ್ನು ರೂಪಿಸಿತ್ತು. ಆದರೆ ಮೋದಿ ಅವುಗಳನ್ನು ನಾಶ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. 
SCROLL FOR NEXT