ಸಂಗ್ರಹ ಚಿತ್ರ 
ದೇಶ

ಫನಿ ಚಂಡಮಾರುತ: ಒಡಿಶಾದಲ್ಲಿ ಹಳದಿ ಅಲರ್ಟ್ ಘೋಷಣೆ, ತೀವ್ರ ಕಟ್ಟೆಚ್ಚರ

ಒಡಿಶಾ ಕರಾವಳಿ ತೀರದತ್ತ ಧಾವಿಸುತ್ತಿರುವ ಫನಿ ಚಡಮಾರುತ ಭೀಕರ ಸ್ವರೂಪ ಪಡೆಯುತ್ತಿದ್ದು, ಈಗಾಗಲೇ ಒಡಿಶಾ ಮತ್ತು ಆಂಧ್ರ ಪ್ರದೇಶ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಪರಿಣಾಮ ಒಡಿಶಾದಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.

ನವದೆಹಲಿ: ಒಡಿಶಾ ಕರಾವಳಿ ತೀರದತ್ತ ಧಾವಿಸುತ್ತಿರುವ ಫನಿ ಚಡಮಾರುತ ಭೀಕರ ಸ್ವರೂಪ ಪಡೆಯುತ್ತಿದ್ದು, ಈಗಾಗಲೇ ಒಡಿಶಾ ಮತ್ತು ಆಂಧ್ರ ಪ್ರದೇಶ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಪರಿಣಾಮ ಒಡಿಶಾದಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.
ಬಂಗಾಳ ಕೊಲ್ಲಿಯ ಈಶಾನ್ಯ ಭಾಗದಲ್ಲಿ ರಚನೆಯಾಗಿರುವ ಫನಿ ಚಂಡಮಾರುತವು ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಸ್ತುತ ಗಂಟೆಗೆ 200 ಕಿ.ಮೀ ವೇಗದಲ್ಲಿ ಬೀಸುತ್ತಿರುವ ಫನಿ ಒಡಿಶಾದತ್ತ ಧಾವಿಸುತ್ತಿದೆ. ಒಡಿಶಾದಲ್ಲಿ ಈಗಾಗಲೇ ಭಾರಿ ಮಳೆಯಾಗುತ್ತಿದ್ದು, ಬೌಧ್, ಕಲಾಹಂಡಿ, ಸಂಬಾಲ್ಪುರ, ಡಿಯೋಘಡ್ ಮತ್ತು ಸುಂದರ್ ಘಡ್ ನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಇದೇ ಮೇ 3 ಶುಕ್ರವಾರಂದು ಫನಿ ಚಂಡಮಾರುತ ಒಡಿಶಾ ಕಡಲ ತೀರಕ್ಕೆ ಅಪ್ಪಳಿಸಲಿದ್ದು, ಚಂಡಮಾರುತವನ್ನು ಎದುರಿಸಲು ಒಡಿಶಾ ಸಕಲ ವ್ಯವಸ್ಥೆಗಳನ್ನೂ ಮಾಡಿಕೊಂಡಿದೆ. ಒಡಿಶಾದಲ್ಲಿ ಎನ್ ಡಿಆರ್ ಎಫ್‌ ಪಡೆಗಳು ಸರ್ವ ಸನ್ನದ್ಧ ಸ್ಥಿತಿಯಲ್ಲಿವೆ. ಫನಿಯ ಕಾರಣಕ್ಕಾಗಿಯೇ ಒಡಿಶಾದಲ್ಲಿ 879 ವಿವಿಧೋದ್ದೇಶ ವಸತಿಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಹತ್ತು ಲಕ್ಷ ಜನರಿಗೆ ಏಕಕಾಲಕ್ಕೆ ಊಟ ವಸತಿ ಕಲ್ಪಿಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಂತೆಯೇ ಕರಾವಳಿ ಭಾಗದ ರೈಲು ಮಾರ್ಗಗಳಲ್ಲಿ ಭಾರಿ ಬದಲಾವಣೆ ಮಾಡಲಾಗಿದೆ.  
ಒಡಿಶಾ ಮಾತ್ರವಲ್ಲದೇ ತಮಿಳುನಾಡು, ಆಂಧ್ರ ಪ್ರದೇಶದ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಭಾಗಗಳಲ್ಲಿಯೂ ತೀವ್ರ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಮೂರೂ ರಾಜ್ಯಗಳಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!