ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಫೋನಿ ಅಬ್ಬರಕ್ಕೆ 3 ಬಲಿ, ಕೇಂದ್ರದಿಂದ 1,000 ಕೋಟಿ ರೂ. ತುರ್ತು ಪರಿಹಾರ ಬಿಡುಗಡೆ

ಒಡಿಶಾ ಕಡಲ ತೀರಕ್ಕೆ ಇಂದು ಬೆಳಗ್ಗೆ ಅಪ್ಪಳಿಸಿದ ಫೋನಿ ಚಂಡಮಾರುತ ಭಾರಿ ಅವಾಂತರ ಸೃಷ್ಟಿ ಮಾಡಿದ್ದು, ಚಂಡಮಾರುತದಿಂದಾಗಿ ಸೃಷ್ಟಿಯಾದ ವಿವಿಧ ಅವಘಡಗಳಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಒಡಿಶಾದಲ್ಲಿ ಫೋನಿ ಚಂಡಮಾರುತದ ಅಬ್ಬರ
Srinivasa Murthy VN
Updated On : 3 May 2019, 4:58 am
ಭುವನೇಶ್ವರ: ಒಡಿಶಾ ಕಡಲ ತೀರಕ್ಕೆ ಗುರುವಾರ ಬೆಳಗ್ಗೆ ಅಪ್ಪಳಿಸಿದ ಫೋನಿ ಚಂಡಮಾರುತ ಭಾರಿ ಅವಾಂತರ ಸೃಷ್ಟಿ ಮಾಡಿದ್ದು, ಚಂಡಮಾರುತದಿಂದಾಗಿ ಸೃಷ್ಟಿಯಾದ ವಿವಿಧ ಅವಘಡಗಳಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಚಂಡಮಾರುತ ಪೀಡಿತ ರಾಜ್ಯಗಳಿಗೆ ತುರ್ತು ಪರಿಹಾರಕ್ಕಾಗಿ 1,000 ಕೋಟಿ ರೂಪಾಯಿ ಬಿಡುಗಡೆ ಮಾಡಿರುವುದಾಗಿ ಹೇಳಿದ್ದಾರೆ.
ಇಂದು ರಾಜಸ್ಥಾನದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಫೋನಿ ಚಂಡಮಾರುತಕ್ಕೆ ಸಂಬಧಿಸಿದಂತೆ ನಾನು ಕ್ಷಣ ಕ್ಷಣದ ಮಾಹಿತಿಯನ್ನು ಪಡೆಯುತ್ತಿದ್ದೇನೆ. ಕೇಂದ್ರ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ತಿಳಿಸಿದ್ದಾರೆ.

Advertisement

Advertisement

ಇಂದು ಬೆಳಗ್ಗೆ ಪ್ರತಿ ಗಂಟೆಗೆ 200 ಕಿ. ಮೀ ವೇಗದಲ್ಲಿ ಪುರಿ ಕಡಲ ತೀರಕ್ಕೆ ಅಪ್ಪಳಿಸಿದ ಫೋನಿ ಚಂಡಮಾರುತ ಮಧ್ಯಾಹ್ನದವರೆಗೂ ಒಡಿಶಾ ಕರಾವಳಿ ತೀರದಲ್ಲಿ ಭಾರಿ ಬಿರುಗಾಳಿ ಸಹಿತ ಮಳೆಯನ್ನು ಸುರಿಸಿತು. 
ಇದೀಗ ಚಂಡಮಾರುತದ ಅಬ್ಬರ ಕೊಂಚ ತಗ್ಗಿದ್ದು, ಚಂಡಮಾರುತ ಪಶ್ಚಿಮ ಬಂಗಾಳದತ್ತ ಮುಖಮಾಡಿದೆ. ಕಡಲ ತೀರಕ್ಕೆ ಒಪ್ಪಳಿಸಿದ ಚಂಡಮಾರುತದ ವೇಗ ಬೆಳಗ್ಗೆ ಪ್ರತೀ ಗಂಟೆಗೆ 245 ಕಿ.ಮೀ ಇತ್ತು. ಇದೀಗ ಚಂಡಮಾರುತದ ವೇಗ ಕಡಿಮೆಯಾಗಿದ್ದು, ಪ್ರತೀ ಗಂಟೆಗೆ 150-160 ವೇಗದಲ್ಲಿ ಬೀಸುತ್ತಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಸ್ತುತ ಫೋನಿ ಚಂಡಮಾರುತ ಉತ್ತರ ಮತ್ತು ಈಶಾನ್ಯ ಭಾರತದತ್ತ ಧಾವಿಸುತ್ತಿದ್ದು, ಕಟಕ್ ನಿಂದ ಸುಮಾರು 30 ಕಿ.ಮೀ ದೂರದಲ್ಲಿದೆ. ನಾಳೆ ಬೆಳಗ್ಗೆ ಫೋನಿ ಚಂಡಮಾರುತ ಪಶ್ಚಿಮ ಬಂಗಾಳ ಪ್ರವೇಶ ಮಾಡುವ ಸಾಧ್ಯತೆ ಇದ್ದು, ಅಲ್ಲಿಯೂ ಭಾರಿ ಬಿರುಗಾಳಿ ಸಹಿತ ಮಳೆ ತರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments