ಫನಿ ಚಂಡಮಾರುತ ಎಫೆಕ್ಟ್: ಉತ್ತರ ಪ್ರದೇಶದಲ್ಲಿ ಸಿಡಿಲಿಗೆ 8 ಮಂದಿ ಬಲಿ
ಫನಿ ಚಂಡಮಾರುತದ ಎಫೆಕ್ಟ್ ಉತ್ತರ ಪ್ರದೇಶದಲ್ಲಿ ಭಾರೀ ಅನಾಹುತ ಸೃಷ್ಟಿಸಿದೆ, ಉತ್ತರ ಪ್ರದೇಶದಲ್ಲಿ ಸಿಡಿಲಿಗೆ 8 ಮಂದಿ ಬಲಿಯಾಗಿದ್ದಾರೆ.
ಲಕ್ನೋ: ಫನಿ ಚಂಡಮಾರುತದ ಎಫೆಕ್ಟ್ ಉತ್ತರ ಪ್ರದೇಶದಲ್ಲಿ ಭಾರೀ ಅನಾಹುತ ಸೃಷ್ಟಿಸಿದೆ, ಉತ್ತರ ಪ್ರದೇಶದಲ್ಲಿ ಸಿಡಿಲಿಗೆ 8 ಮಂದಿ ಬಲಿಯಾಗಿದ್ದಾರೆ.
ಚಾಂದೌಳಿ ಮತ್ತು ಸೋನ್ ಭಾದ್ರಾದಲ್ಲಿ ಸಿಡಿಲಿಗೆ 8 ಮಂದಿ ಸಾವನ್ನಪ್ಪಿದ್ದಾರೆ, ಈಗಾಗಲೇ ಹವಾಮಾನ ಇಲಾಖೆ, ಮುಂದಿನ 2 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಸಿಡಿಲು ಬಡಿದಾಗ ನಾಲ್ಕು ಮಂದಿ ಸಾವನ್ನಪ್ಪಿದರು, ಇನ್ನೂ ಐದು ಮಂದಿ ಗಂಬೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನೂ ಎರಡನೇ ಘಟನೆಯಲ್ಲಿ ಸಿಡಿಲು ಬಡಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ, ಇವರ ಜೊತೆಗೆ ಓರ್ವ ವೃದ್ಧ ಹಾಗೂ ಇಬ್ಬರು ಸಹೋದರರು ಕೂಡ ಸಿಡಿಲಿಗೆ ಬಲಿಯಾಗಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.