ಮೋದಿ ಸರ್ಕಾರಕ್ಕೂ ಮುನ್ನ ಸರ್ಜಿಕಲ್ ಸ್ಟ್ರೈಕ್ ನಡೆದಿವೆ: ಲೆಫ್ಟಿನೆಂಟ್ ಜನರಲ್ ಹೂಡಾ
ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೂ ಮುನ್ನ ಹಲವು ಸರ್ಜಿಕಲ್ ಸ್ಟ್ರೈಕ್ ಗಳು ನಡೆದಿವೆ ಎಂದು ನಿವೃತ್ತ ಲೆಫ್ಟಿನೆಂಟ್ ಜನರಲ್ ಡಿಎಸ್ ಹೂಡಾ...
ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೂ ಮುನ್ನ ಹಲವು ಸರ್ಜಿಕಲ್ ಸ್ಟ್ರೈಕ್ ಗಳು ನಡೆದಿವೆ ಎಂದು ನಿವೃತ್ತ ಲೆಫ್ಟಿನೆಂಟ್ ಜನರಲ್ ಡಿಎಸ್ ಹೂಡಾ ಅವರು ಶನಿವಾರ ಹೇಳಿದ್ದಾರೆ.
ಇಂದು ಸುದ್ದಿಗಾರರರೊಂದಿಗೆ ಮಾತನಾಡಿದ ಹೂಡಾ ಅವರು, ಭಾರತೀಯ ಸೇನೆ ಈ ಹಿಂದೆಯೇ ಸರ್ಜಿಕಲ್ ಸ್ಟ್ರೈಕ್ ಗಳನ್ನು ನಡೆಸಿದೆ. ಆದರೆ ಆ ದಾಳಿಗಳು ನಡೆದ ದಿನ ಮತ್ತು ಪ್ರದೇಶಗಳ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು 2016ರಲ್ಲಿ ಮೋದಿ ಸರ್ಕಾರ ನಡೆಸಿದ ಸರ್ಜಿಕಲ್ ಸ್ಟ್ರೈಕ್ ನೇತೃತ್ವವನ್ನು ವಹಿಸಿದ್ದ ಹೂಡಾ ಅವರು ಹೇಳಿದ್ದಾರೆ.
ಖಂಡಿತವಾಗಿಯೂ ಭಾರತೀಯ ಸೇನೆ ಈ ಹಿಂದೆ ಗಡಿ ನಿಯಂತ್ರಣ ರೇಖೆ ದಾಟಿ ಹಲವು ಕಾರ್ಯಾಚರಣೆಗಳನ್ನು ನಡೆಸಿದ. ಈ ಕುರಿತು ಅಷ್ಟಾಗಿ ವರದಿಯಾಗುವುದಿಲ್ಲ. ಅಂತಹ ದಾಳಿಗಳು ಬೆಟಾಲಿಯನ್, ದಳ ಅಥವಾ ವಿಭಾಗೀಯ ಮಟ್ಟದಲ್ಲಿ ನಡೆಯುತ್ತವೆ ಎಂದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ 6 ಸರ್ಜಿಕಲ್ ಸ್ಟ್ರೈಕ್ ನಡೆದಿವೆ ಎಂದು ಕಾಂಗ್ರೆಸ್ ಹೇಳಿತ್ತು. ಆದರೆ ಬಿಜೆಪಿ ಮಾತ್ರ ಈ ಹಿಂದೆ ಯಾವುದೇ ಸರ್ಜಿಕಲ್ ದಾಳಿ ನಡೆದೇ ಇಲ್ಲ ಎಂದು ವಾದಿಸುತ್ತಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.