ಫೋನಿ ಚಂಡಮಾರುತ: ಒಡಿಶಾದಲ್ಲಿ ಸಾವಿನ ಸಂಖ್ಯೆ 16ಕ್ಕೆ ಏರಿಕೆ
ಫೋನಿ ಚಂಡಮಾರುತದ ಪರಿಣಾಮ ಒಡಿಶಾದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಭುವನೇಶ್ವರ: ಫೋನಿ ಚಂಡಮಾರುತದ ಪರಿಣಾಮ ಒಡಿಶಾದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಕಳೆದ ಮೂರು ದಿನಗಳ ಹಿಂದೆ ಒಡಿಶಾಗೆ ಅಬ್ಬರಿಸಿದ ಫೋನಿ ಚಂಡಮಾರುತದ ಅಬ್ಬರಕ್ಕೆ ಈ ವರೆಗೂ ಬಲಿಯಾದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದು, ಚಂಡಮಾರುತದ ಅಬ್ಬರಕ್ಕೆ ಒಡಿಶಾದ ಪುರಿ ಸೇರಿದಂತೆ ಕರಾವಳಿ ತೀರದ ಜಿಲ್ಲೆಗಳಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿದೆ. ವಿದ್ಯುತ್ ಕಂಬಗಳು, ಮನೆಗಳು, ಗುಡಿಸಲುಗಳು, ಮರಗಳು ಧರೆಗುರುಳಿದ್ದು ಜನಜೀವನ ಅಸ್ತವ್ಯಸ್ಥವಾಗಿದೆ.
ಇನ್ನು ಚಂಡಮಾರುತದಿಂದ ಉಂಟಾಗಿರುವ ಅನಾಹುತದ ಬಗ್ಗೆ ಒಡಿಶಾದ ಸಿಎಂ ನವೀನ್ ಪಾಟ್ನಾಯಕ್ ವೈಮಾನಿಕ ಸಮೀಕ್ಷೆ ನಡೆಸಿ ಮಾಹಿತಿ ಕಲೆ ಹಾಕಿದ್ದು, ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಇನ್ನು ಚಂಡಮಾರುತದ ಬಳಿಕ ಪುರಿಯಲ್ಲಿ ವಿದ್ಯುತ್ ಸೇವೆ ಸ್ಥಗಿತವಾಗಿದ್ದು, ಕುಡಿಯುವ ನೀರಿಗಾಗಿ ಹಾಹಾಕಾರ ಸೃಷ್ಟಿಯಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.