ಗನ್ ಕೆಳಗಿಟ್ಟು ಶರಣಾದ ಜೈಶ್-ಎ-ಮೊಹಮ್ಮದ್ ಉಗ್ರ! 
ದೇಶ

ಜೈಷ್ ಎ ಮೊಹ್ಮದ್ ಸಂಘಟನೆ ಸೇರಿದ್ದ ಯುವಕ ಗನ್ ಕೆಳಗಿಟ್ಟು ಶರಣು, ಮರಳಿ ಮನೆಗೆ!

ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕ ಹಿಂಸಾಚಾರವನ್ನು ಬಿಟ್ಟು ಮನೆಗೆ ವಾಪಸ್ಸಾಗಿದ್ದಾನೆ.

ಶ್ರೀನಗರ: ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕ ಹಿಂಸಾಚಾರವನ್ನು ಬಿಟ್ಟು ಮನೆಗೆ ವಾಪಸ್ಸಾಗಿದ್ದಾನೆ. 
ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ಯುವಕ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ಸೇರಿದ್ದ. ಆದರೆ ಈಗ ಭಯೋತ್ಪಾದನೆ ಬಿಟ್ಟು ಮುಖ್ಯವಾಹಿನಿಗೆ ಬಂದಿದ್ದಾನೆ, ಇದಕ್ಕೆ ಆತನ ಕುಟುಂಬ ಸದಸ್ಯರು, ಪೊಲೀಸರ ಸಹಕಾರ ಅತ್ಯಂತ ಮಹತ್ವದ್ದಾಗಿದೆ. ಯುವಕನ ಗುರುತನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 
ಕಾಶ್ಮೀರಿ ಯುವಕನೋರ್ವ ಉಗ್ರವಾದನ್ನು ತೊರೆದು ಮುಖ್ಯವಾಹಿನಿಗೆ ಬಂದಿರುವ ಎರಡನೇ ಉದಾಹರಣೆ ಇದಾಗಿದೆ. ಇದಕ್ಕೂ ಮುನ್ನ ಏ.30 ರಂದು ಇದೇ ಪುಲ್ವಾಮದಲ್ಲಿ ಓರ್ವ ಭಯೋತ್ಪಾದಕ ಹಿಂಸಾಚಾರವನ್ನು ತೊರೆದು ಮುಖ್ಯವಾಹಿನಿಗೆ ಬಂದಿದ್ದ. 
ಕಾಶ್ಮೀರಿ ಯುವಕರು ಭಯೋತ್ಪಾದಕ ಸಂಘಟನೆಗಳನ್ನು ಸೇರುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT