ಬೆಂಗಳೂರು: ರಾಜ್ಯ ಮಾಹಿತಿ ಆಯೋಗದ ಮುಖ್ಯ ಆಯುಕ್ತರಾಗಿ ಎನ್.ಸಿ.ಶ್ರೀನಿವಾಸ್ ಇಂದು ಪ್ರತಿಜ್ಞಾವಿಧಿ ಸ್ವೀಕರಿಸಿದರು.
ರಾಜಭವನದ ಬಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಪ್ರತಿಜ್ಞಾವಿಧಿ ಬೋಧಿಸಿದರು. ಇದೇ ವೇಳೆ ಮಾಹಿತಿ ಆಯುಕ್ತರಾಗಿ ಎಸ್.ಎಂ.ಸೋಮಶೇಖರ್ ಹಾಗೂ ಕೆ.ಪಿ.ಮಂಜುನಾಥ್ ಕೂಡ ಅಧಿಕಾರ ಸ್ವೀಕರಿಸಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಎಸ್ ಎಂ ಸೋಮಶೇಖರ ಮತ್ತು ಕೆ ಪಿ ಮಂಜುನಾಥ ಅವರು ಮಾಹಿತಿ ಆಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮೂರೂ ಗಣ್ಯರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು. ಶ್ರೀನಿವಾಸ ಮತ್ತು ಸೋಮಶೇಖರ ಅವರು ಆಂಗ್ಲ ಭಾಷೆಯಲ್ಲಿ ಹಾಗೂ ಮಂಜುನಾಥ ಅವರು ಕನ್ನಡ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮುನ್ನ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯ್ ಭಾಸ್ಕರ್ ಅವರು ಮೂರೂ ಗಣ್ಯರ ನೇಮಕಾತಿ ಅಧಿಸೂಚನೆಯನ್ನು ವಾಚಿಸಿದರು.
ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ. ಸಣ್ಣ ನೀರಾವರಿ ಸಚಿವ ಸಿ ಎಸ್ ಪುಟ್ಟರಾಜು, ಲೋಕೋಪಯೋಗಿ ಸಚಿವರ ಸಂಸದೀಯ ಕಾರ್ಯದರ್ಶಿ ಹಾಗೂ ರಾಜ್ಯ ವಿಧಾನ ಪರಿಷತ್ ಸದಸ್ಯ ಕೆ ಎ ತಿಪ್ಪೇಸ್ವಾಮಿ, ಶ್ರವಣಬೆಳಗೊಳ ವಿಧಾನ ಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ, ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ, ಕರ್ನಾಟಕ ಉಚ್ಛ ನ್ಯಾಯಾಲಯದ ಹಂಗಾಮಿ ಮುಖ್ಯ ನ್ಯಾಯಾಧೀಶ ಎಲ್. ನಾರಾಯಣಸ್ವಾಮಿ, ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ಕೆ ಜಿ ನಾಗಲಕ್ಷ್ಮೀ ಬಾಯಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಡಾ ಇ ವಿ ರಮಣ ರೆಡ್ಡಿ, ಕಾರ್ಯದರ್ಶಿ ಎಸ್ ಸೆಲ್ವ ಕುಮಾರ್, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ರಮೇಶ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಶಿಷ್ಟಾಚಾರ ವಿಭಾಗದ ಉಪ ಕಾರ್ಯದರ್ಶಿ ವಿಜಯ್ ಮಹಾಂತೇಶ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ. ಎಂ. ವಿಜಯ್ ಶಂಕರ್ ಮತ್ತಿತರರು ಸಮಾರಂಭದಲ್ಲಿ ಹಾಜರಿದ್ದರು.