ನರೇಂದ್ರ ಮೋದಿ-ಪ್ರಿಯಾಂಕಾ ವಾದ್ರಾ 
ದೇಶ

ಪ್ರಧಾನಿ ನರೇಂದ್ರ ಮೋದಿ ದುರ್ಯೋಧನ: ಪ್ರಿಯಾಂಕಾ ವಾದ್ರಾ

ಪ್ರಧಾನಿ ನರೇಂದ್ರ ಮೋದಿ ಅವರನ್ನು ದುರ್ಯೋಧನ ಎಂದು ಪ್ರಿಯಾಂಕಾ ವಾದ್ರಾ ಕರೆದಿರುವುದು ಇದೀಗ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ದುರ್ಯೋಧನ ಎಂದು ಪ್ರಿಯಾಂಕಾ ವಾದ್ರಾ ಕರೆದಿರುವುದು ಇದೀಗ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ.
ಹರಿಯಾಣದಲ್ಲಿ ಇಂದು ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಪ್ರಿಯಾಂಕಾ ವಾದ್ರಾ ಪ್ರಧಾನಿ ಮೋದಿ ಮಹಾಭಾರತದ ದುರ್ಯೋಧನನಂತೆ ಅಕ್ರಮಣಕಾರಿ. ಇದೇ ಕಾರಣಕ್ಕೆ ಅವರು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲು ಕಾಣುತ್ತಾರೆ ಎಂದು ಪ್ರಿಯಾಂಕಾ ಗಾಂಧಿ ಹರಿಹಾಯ್ದಿದ್ದರು. ತಮ್ಮ ತಂದೆ ರಾಜೀವ್ ಗಾಂಧಿ ಅವರನ್ನು ನಂಬರ್ 1 ಭ್ರಷ್ಟಾಚಾರಿ ಎಂದು ಪ್ರಧಾನಿ ಮೋದಿ ಕರೆದಿದ್ದನ್ನೂ ಪ್ರಿಯಾಂಕಾ ಖಂಡಿಸಿದರು.
ಪ್ರಿಯಾಂಕಾ ವಾದ್ರಾ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಈ ಬಾರಿ ಲೋಕಸಭೆ ಚುನಾವಣೆಯ ಫಲಿತಾಂಶವೇ ಪ್ರಿಯಾಂಕಾರಿಗೆ ತಕ್ಕ ಪಾಠ ಕಲಿಸುತ್ತದೆ. ಈ ತರದ ಹೇಳಿಕೆಗಳೆಲ್ಲಾ ಕಾಂಗ್ರೆಸ್ ನ ಹತಾಷೆಯ ಮನೋಭಾವವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT