ನವದೆಹಲಿ: ಇವಿಯಂಗಳ ವಿವಿ ಪ್ಯಾಟ್ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸಬೇಕು ಎಂದು ಪ್ರತಿಪಕ್ಷಗಳು ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಚುನಾವಣೆಗಳಲ್ಲಿ ಪ್ರತಿ ವಿಧಾನಸಭಾ ವಲಯದಲ್ಲಿ ಇವಿಎಂಗಳಿಗೆ ವಿವಿ ಪ್ಯಾಟ್ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವಂತೆ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರ ನೇತೃತ್ವದಲ್ಲಿ 21 ವಿರೋಧ ಪಕ್ಷಗಳು ಸಲ್ಲಿಸಿದ್ದವು. ಮಂಗಳವಾರ ಬೆಳಗ್ಗೆ ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠ, ಅತ್ಯಂತ ಕಡಿಮೆ ಅವಧಿಯಲ್ಲಿ ವಿಚಾರಣೆ ಮುಗಿಸಿ, ನಾವು ಈ ಹಿಂದೆ ನೀಡಿರುವ ತೀರ್ಪನ್ನು ಬದಲಿಸಲು ಸಾಧ್ಯವಿಲ್ಲ, ಎಂದು ಹೇಳುವ ಮೂಲಕ ಅರ್ಜಿಯನ್ನು ವಜಾಗೊಳಿಸಿದೆ.
ಕಳೆದ ಏಪ್ರಿಲ್ 8ರಂದು ಸುಪ್ರೀಂಕೋರ್ಟ್, ಪ್ರತಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಐದು ವಿಧಾನಸಭಾ ವಲಯದಲ್ಲಿ ಕನಿಷ್ಠ ಐದು ಕಡೆ ಇವಿಎಂಗಳೊಂದಿಗೆ ವಿವಿ ಪ್ಯಾಟ್ ಗಳನ್ನು ತಾಳೆ ಮಾಡುವ ವ್ಯವಸ್ಥೆ ಮಾಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು. ಈ ಕುರಿತು 21 ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್ ನಲ್ಲಿ ಮರು ಪರಿಶೀಲನಾ ಸಲ್ಲಿಸಿದ್ದವು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics