ಸಂಗ್ರಹ ಚಿತ್ರ 
ದೇಶ

ಗಂಭೀರ್ ವಿರುದ್ಧ ನಾವು ಮಾನನಷ್ಟ ಮೊಕದ್ದಮೆ ಹೂಡುತ್ತೇವೆ: ಮನೀಶ್ ಸಿಸೋಡಿಯಾ

ಆಪ್ ಅಭ್ಯರ್ಥಿ ಆತಿಶ್ ಅವರ ವಿರುದ್ಧ ಕರಪತ್ರ ಹಂಚಿಕೆ ಪ್ರಕರಣ ತಾರಕ್ಕೇರಿದ್ದು, ಈ ಸಂಬಂಧ ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ಅವರ ಮಾನನಷ್ಟ ಮೊಕದ್ದಮೆ ಹೇಳಿಕೆಗೆ ತಿರುಗೇಟು ನೀಡಿರುವ ಆಮ್ ಆದ್ಮಿ ಪಕ್ಷ ತಾವೇ ಗಂಭೀರ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇವೆ ಎಂದು ಹೇಳಿದೆ.

ನವದೆಹಲಿ: ಆಪ್ ಅಭ್ಯರ್ಥಿ ಆತಿಶ್ ಅವರ ವಿರುದ್ಧ ಕರಪತ್ರ ಹಂಚಿಕೆ ಪ್ರಕರಣ ತಾರಕ್ಕೇರಿದ್ದು, ಈ ಸಂಬಂಧ ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ಅವರ ಮಾನನಷ್ಟ ಮೊಕದ್ದಮೆ ಹೇಳಿಕೆಗೆ ತಿರುಗೇಟು ನೀಡಿರುವ ಆಮ್ ಆದ್ಮಿ ಪಕ್ಷ ತಾವೇ ಗಂಭೀರ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇವೆ ಎಂದು ಹೇಳಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ದೆಹಲಿ ಉಪ ಮುಖ್ಯಮಂತ್ರಿ ಹಾಗೂ ಹಿರಿಯ ಆಪ್ ನಾಯಕ ಮನೀಶ್ ಸಿಸೋಡಿಯಾ ಅವರು, ಕರಪತ್ರಗಳ ಹಂಚಿಕ ಮೂಲಕ ಅವರೇ ನಮ್ಮ ಮಾನಹಾನಿಗೆ ಯತ್ನಿಸಿದ್ದಾರೆ. ಮಾನಹಾನಿಯಾಗಿರುವುದು ನಮಗೆ. ಅಲ್ಲದೇ ನಮ್ಮ ವಿರುದ್ಧವೇ ಮಾನಹಾನಿ ಮೊಕದ್ದಮೆ ಹೂಡಿದ್ದಾರೆ. ಹೀಗಾಗಿ ನಾವೇ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇವೆ ಎಂದು ಹೇಳಿದ್ದಾರೆ.
ಇನ್ನು ಆತಿಶಿ ವಿರುದ್ಧ ಕರಪತ್ರ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದ ಗಂಭೀರ್,  ತಮ್ಮ ವಿರುದ್ಧ ಕೇಳಿ ಬಂದ ಆರೋಪ ಸಾಬೀತಾದರೆ ಚುನಾವಣೆಯಿಂದ ಹಿಂದೆ ಸರಿಯುವುದಾಗಿ ಹೇಳಿದ್ದರು. ಅಲ್ಲದೆ ಆರೋಪ ಸುಳ್ಳಾದರೆ ನೀವು ರಾಜಕೀಯದಿಂದ ನಿವೃತ್ತರಾಗುತ್ತಿರಾ ಎಂದು ಕೇಜ್ರಿವಾಲ್ ಮತ್ತು ಆತಿಶಿ ಅವರನ್ನು ಪ್ರಶ್ನಿಸಿದ್ದರು. ಅಂತೆಯೇ ಆಪ್ ಅಭ್ಯರ್ಥಿ ಆತಿಶಿ ಮತ್ತು ಮತ್ತಿತರರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಇನ್ನು ನಿನ್ನೆ ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದ ಆಪ್ ಆಭ್ಯರ್ಥಿ ಆತಿಶಿ, ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ತಮ್ಮ ವಿರುದ್ಧ ಅವಹೇಳನಕಾರಿ ಕರಪತ್ರ ಹಂಚುತ್ತಿದ್ದಾರೆ ಎಂದು ಆರೋಪಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!