ಭಾರತದಲ್ಲಿ ತನ್ನ ಸ್ಥಾಪನೆಯನ್ನು ಘೋಷಿಸಿದ ಇಸ್ಲಾಮಿಕ್ ಸ್ಟೇಟ್ ಉಗ್ರರ ಸಂಘಟನೆ!
ಇಸ್ಲಾಮಿಕ್ ಸ್ಟೇಟ್ (ಐಎಸ್ ) ಉಗ್ರ ಸಂಘಟನೆ ಭಾರತದಲ್ಲಿ ತನ್ನ ’ಪ್ರಾಂತ್ಯ’ವನ್ನು ಸ್ಥಾಪಿಸಿರುವುದಾಗಿ ಘೋಷಣೆ ಮಾಡಿದೆ.
ನವದೆಹಲಿ: ಇಸ್ಲಾಮಿಕ್ ಸ್ಟೇಟ್ (ಐಎಸ್ ) ಉಗ್ರ ಸಂಘಟನೆ ಭಾರತದಲ್ಲಿ ತನ್ನ ’ಪ್ರಾಂತ್ಯ’ವನ್ನು ಸ್ಥಾಪಿಸಿರುವುದಾಗಿ ಘೋಷಣೆ ಮಾಡಿದೆ.
ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಸ್ಲಾಮಿಕ್ ಸ್ಟೇಟ್ (ಐಎಸ್) ನೊಂದಿಗೆ ಸಂಪರ್ಕ ಹೊಂದಿದ್ದ ಉಗ್ರನನ್ನು ಹೊಡೆದುರುಳಿಸಲಾಗಿದೆ. ಈ ಬೆನ್ನಲ್ಲೇ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಭಾರತದಲ್ಲಿ ತನ್ನ ಪ್ರಾಂತ್ಯ ಸ್ಥಾಪನೆಯನ್ನು ಘೋಷಿಸಿದೆ.
ಭಾರತದಲ್ಲಿ ಸ್ಥಾಪನೆಯಾಗಿರುವ ತನ್ನ ಹೊಸ ಪ್ರಾಂತ್ಯಕ್ಕೆ ವಿಲಾಯ್ಹ್ ಆಫ್ ಹಿಂದ್ ಎಂದು ಕರೆದುಕೊಂಡಿದ್ದು, ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಂಟುಮಾಡಿದ ಸಾವಿಗೆ ಹೊಣೆ ಹೊತ್ತುಕೊಂಡಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.