ದೇಶ

ಕಾಶ್ಮೀರದ ಶೋಪಿಯಾನ್ ನಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನೆ

Raghavendra Adiga
ಶೋಪಿಯಾನ್: ಜಮ್ಮು ಕಾಶ್ಮೀರದ ಶೋಪಿಯಾನ್ ನಲ್ಲಿ ಭಾನುವಾರ ಭದ್ರತಾಪಡೆ ಹಾಗೂ ಉಗ್ರರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಶೊಪಿಯಾನ್ ಜಿಲ್ಲೆಯ ಹಿಂಡ್ಸಿತಾಪುರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದೆ.ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು ಪ್ರತಿಯಾಗಿ ಸೇನಾಪಡೆ ಎನ್ ಕೌಂಟರ್ ನಡೆಸಿ ಇಬ್ಬರು ಭಯೋತ್ಪಾದಕರನ್ನು ಕೊಂದು ಹಾಕಿದೆ.

ಎನ್ ಕೌಂಟರ್ ನಡೆದ ಸ್ಥಳದಿಂದ ಶಾಸ್ತ್ರಾಸ್ತ್ರಗಳು ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.
SCROLL FOR NEXT