ದೇಶ

ಕಮಲ್ ಹಾಸನ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ನ್ಯಾಯಾಲಯ

Nagaraja AB

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ಸ್ವತಂತ್ರ ಭಾರತದ ಮೊದಲ ಹಿಂದೂ ಭಯೋತ್ಪಾದಕ ಎಂದಿದ್ದ ನಟ, ರಾಜಕಾರಣಿ ಕಮಲ್ ಹಾಸನ್ ವಿರುದ್ಧ ದೆಹಲಿಯ ನ್ಯಾಯಾಲಯವೊಂದು ಸ್ವಯಂ ಪೇರಿತ ದೂರು ದೂಖಲಿಸಿಕೊಂಡಿದೆ.

ಈ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 2ಕ್ಕೆ ಮೆಟ್ರೋಪಾಲಿಟಿಯನ್ ಮ್ಯಾಜಿಸ್ಟ್ರೇಟ್ ಸುಮೀತ್ ಆನಂದ್ ಮುಂದೂಡಿದ್ದಾರೆ. ಆಗ ದೂರುದಾರ ವಿಷ್ಣುಗುಪ್ತ ಅವರ ಹೇಳಿಕೆಯನ್ನು ಪಡೆಯಲಾಗುತ್ತದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್  153-ಎ (ಧರ್ಮ, ಜನಾಂಗ, ಭಾಷೆ ಮುಂತಾದ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295-ಎ (ಧರ್ಮವನ್ನು ಅವಮಾನಿಸುವ) ಅಡಿಯಲ್ಲಿ ಶಿಕ್ಷೆಗೆ ಗುರಿಯಾಗಬಹುದಾದ ಅಪರಾಧಗಳಡಿಯಲ್ಲಿ ಕಮಲ್ ಹಾಸನ್ ವಿರುದ್ಧ ದೂರು ದಾಖಲಿಸಲಾಗಿದೆ.

ಈ ಎರಡು ಸೆಕ್ಷನ್ ಗಳ ಅಡಿಯಲ್ಲಿ ಮೂರು ವರ್ಷ ಜೈಲು ಶಿಕ್ಷೆ ಅಥವಾ ದಂಡವನ್ನು ವಿಧಿಸಲು ಅವಕಾಶವಿದೆ.

SCROLL FOR NEXT