ಕರಣ್ ಒಬೆರಾಯ್ 
ದೇಶ

ಅತ್ಯಾಚಾರ ಪ್ರಕರಣ: ನಟ ಕರಣ್‌ ಒಬೆರಾಯ್‌ ಜಾಮೀನು ಅರ್ಜಿ ವಜಾ

ಮಹಿಳೆ ಮೇಲೆ ಅತ್ಯಾಚಾರ ಎಸಗಿ, ಬ್ಲ್ಯಾಕ್ ಮೇಲ್ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಿಂದಿ ಕಿರುತೆರೆಯ ಖ್ಯಾತ ನಟ ಕರಣ್‌ ಒಬೆರಾಯ್‌...

ಮುಂಬೈ: ಮಹಿಳೆ ಮೇಲೆ ಅತ್ಯಾಚಾರ ಎಸಗಿ, ಬ್ಲ್ಯಾಕ್ ಮೇಲ್ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಿಂದಿ ಕಿರುತೆರೆಯ ಖ್ಯಾತ ನಟ ಕರಣ್‌ ಒಬೆರಾಯ್‌ ಅವರ ಜಾಮೀನು ಅರ್ಜಿಯನ್ನು ಸೆಷನ್ಸ್ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಜಾಮೀನು ಕೋರಿ ಒಬೆರಾಯ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಸ್ ಬಘಲೆ ಅವರು, ಆರೋಪಿಗೆ ಜಾಮೀನು ನೀಡಲು ನಿರಾಕರಿಸಿದ್ದಾರೆ.
ನಟನ ವಿರುದ್ಧ ಮಹಿಳೆ ಸುಳ್ಳು ಆರೋಪ ಮಾಡಿದ್ದು, ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸುವುದಾಗಿ ಒಬೆರಾಯ್ ಪರ ವಕೀಲ ದಿನೇಶ್ ತಿವಾರಿ ಅವರು ತಿಳಿಸಿದ್ದಾರೆ.
2016ರಿಂದ ತನ್ನೊಂದಿಗೆ ಸಂಬಂಧದಲ್ಲಿದ್ದ 40 ವರ್ಷದ ನಟ ಒಬೆರಾಯ್ ತನ್ನನ್ನು ಮದುವೆಯಾಗುವುದಾಗಿ ವಂಚಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. 
ಅತ್ಯಾಚಾರ ಎಸಗಿದ್ದಲ್ಲದೆ ತನ್ನ ಕೆಲವು ಆಕ್ಷೇಪಾರ್ಹ ವಿಡಿಯೋಗಳನ್ನು ತೆಗೆದಿದ್ದು, ಹಣ ನೀಡದಿದ್ದರೆ ಆ ವಿಡಿಯೋಗಳನ್ನು ಬಹಿರಂಗಪಡಿಸುವುದಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಮಹಿಳೆ ದೂರಿದ್ದರು.
ಮಹಿಳೆ ನೀಡಿದ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಮೇ 6ರಂದು ನಟ ಒಬೆರಾಯ್ ಅವರನ್ನು ಬಂಧಿಸಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!