ದೇಶ

ಪುಲ್ವಾಮಾದಲ್ಲಿ ಎನ್ಕೌಂಟರ್: ಮೂರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ!

Vishwanath S
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪುಲ್ವಾಮಾ ಉಗ್ರ ದಾಳಿಯ ಬಳಿಕ ಭಾರತೀಯ ಸೇನೆ ಜೈಶ್ ಉಗ್ರರ ಹುಟ್ಟಡಗಿಸಿದೆ. ಇದೀಗ ಗಡಿಯಲ್ಲಿ ಬಾಲ ಬಿಚ್ಚುತ್ತಿರುವ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ ಉಗ್ರರನ್ನು ಸೇನೆ ಹೊಡೆದುರುಳಿಸಿದೆ.
ಆವಂತಿಪುರದಲ್ಲಿ ಅಡಗಿ ಕುಳಿತಿದ್ದ ಉಗ್ರ ವಿರುದ್ಧ ಭಾರತೀಯ ಸೇನೆ ಎನ್ಕೌಂಟರ್ ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು ಮತೋರ್ವ ಅಡಗಿ ಕುಳಿತ್ತಿದ್ದ. ಆತನನ್ನು ಭಾರತೀಯ ಸೇನೆ ಹತ್ಯೆಗೈದಿದೆ.
ಉಗ್ರರ ಪೈಕಿ ಓರ್ವನನ್ನು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಶೌಕತ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದೆ.
SCROLL FOR NEXT