ದೇಶ

ಕಮಲ್ ನಾಥ್ ಸರ್ಕಾರ ಬಹುಮತ ಕಳೆದುಕೊಂಡಿದೆ: ಮಧ್ಯ ಪ್ರದೇಶ ರಾಜ್ಯಪಾಲರಿಗೆ ಬಿಜೆಪಿ ದೂರು

Lingaraj Badiger
ಭೋಪಾಲ್: ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡಿದ್ದು, ಬಹುಮತ ಸಾಬೀತುಪಡಿಸಲು ವಿಶೇಷ ಅಧಿವೇಶನ ಕರೆಯಬೇಕು ಎಂದು ಮಧ್ಯ ಪ್ರದೇಶ ರಾಜ್ಯಾಪಾಲೆ ಆನಂದಿಬೇನ್ ಪಟೇಲ್ ಅವರಿಗೆ ಪತ್ರ ಬರೆದಿದೆ.
ಲೋಕಸಭೆ ಚುನಾವಣೆಯ ಮತಗಟ್ಟೆ ಸಮೀಕ್ಷೆಯಲ್ಲಿ ಎನ್ ಡಿಎ ಸ್ಪಷ್ಟ ಬಹುಮತ ಪಡೆದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದೆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ಬಿಎಸ್ ಪಿ ಬೆಂಬಲದೊಂದಿಗೆ ಸರ್ಕಾರ ನಡೆಸುತ್ತಿರುವ ಕಮಲ್ ನಾಥ್ ಗೆ ಸಂಕಷ್ಟ ಎದುರಾಗಿದೆ.
ಕಮಲ್ ನಾಥ್ ಸರ್ಕಾರದ ಮೇಲೆ ಜನ ವಿಶ್ವಾಸ ಕಳೆದುಕೊಂಡಿದ್ದು, ವಿಶೇಷ ಅಧಿವೇಶನ ಕರೆಯುವಂತೆ ರಾಜ್ಯಾಪಾಲರಿಗೆ ತಾವು ಪತ್ರ ಬರೆಯುವುದಾಗಿ ಮಧ್ಯ ಪ್ರದೇಶ ವಿಧಾನಸಭೆಯ ಪ್ರತಿಪಕ್ಷ ನಾಯಕ ಗೋಪಾಲ್ ಭಾರ್ಗವ್ ಅವರು ಹೇಳಿದ್ದಾರೆ.
ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಿಶ್ವಾಸವಿದೆ ಎಂಬುದು ಮತಗಟ್ಟೆ ಸಮೀಕ್ಷೆಗಳಿಂದ ಸ್ಪಷ್ಟವಾಗಿದೆ. ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ರಾಜ್ಯದಲ್ಲಿ ಎರಡರಿಂದ ಮೂರು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಲಿದೆ ಎಂದು ಭಾರ್ಗವ್ ತಿಳಿಸಿದ್ದಾರೆ.
ನಿನ್ನೆಯಷ್ಟೆ, ಲೋಕಸಭೆ ಚುನಾವಣೆ ನಂತರ ಕಮಲ್ ನಾಥ್ ಮಧ್ಯ ಪ್ರದೇಶ ಮುಖ್ಯಮಂತ್ರಿಯಾಗಿ ಮುಂದುವರೆಯುವ ಬಗ್ಗೆ ಅನುಮಾನವಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರು ಹೇಳಿದ್ದರು.
SCROLL FOR NEXT