ದೇಶ

ಸ್ವತಂತ್ರ ಭಾರತದ ಮೊದಲ ಉಗ್ರ ಹಿಂದೂ ಹೇಳಿಕೆ: ಕಮಲ್​ ಹಾಸನ್ ಗೆ ನಿರೀಕ್ಷಣಾ ಜಾಮೀನು

Lingaraj Badiger
ಚೆನ್ನೈ: ರಾಷ್ಟ್ರಪಿತ ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಹಿಂದೂ ಉಗ್ರ ಎಂಬ ವಿವಾದಾತ್ಮ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಅವರಿಗೆ ಸೋಮವಾರ ಮದ್ರಾಸ್ ಹೈಕೋರ್ಟ್​ನ ಮಧುರೈ ಪೀಠ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ. 
ಹಿಂದೂ ಉಗ್ರ ಹೇಳಿಕೆಗೆ ಸಂಬಂಧಿಸಿದಂತೆ ಕಮಲ್ ಹಾಸನ್ ಅವರ ವಿರುದ್ಧ ಕರೂರ್ ಜಿಲ್ಲೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಪರಿಣಾಮ ಬಂಧನದ ಭೀತಿಯಲ್ಲಿದ್ದ ಕಮಲ್ ಹಾಸನ್ ಅವರು ಮುಂಜಾಗ್ರತಾ ಕ್ರಮವಾಗಿ ಕಮಲ್ ಮದ್ರಾಸ್​ ಹೈಕೋರ್ಟ್​ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಮಧುರೈ ಪೀಠ  ನಟ ಕಮಲ್ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿ ಆದೇಶಿಸಿದೆ.
ತಿರುಪ್ಪರಗುಂಡ್ರಂ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ಪಕ್ಷದ ಅಭ್ಯರ್ಥಿ ಪರ ಪ್ರಚಾರದ ವೇಳೆ ಮಾತನಾಡಿದ್ದ ಕಮಲ್ ಹಾಸನ್​ “ನಾನು ಇದು ಮುಸ್ಲೀಮರ ಪ್ರದೇಶ ಎಂಬ ಕಾರಣಕ್ಕೆ ಈ ಹೇಳಿಕೆ ನೀಡುತ್ತಿಲ್ಲ. ಗಾಂಧಿಯ ಪ್ರತಿಮೆಯ ಮುಂದೆ ನಿಂತು ಹೇಳುತ್ತಿದ್ದೇನೆ. ಸ್ವತಂತ್ರ್ಯ ಭಾರತದ ಮೊದಲ ಉಗ್ರ ಓರ್ವ ಹಿಂದು. ಆತನ ಹೆಸರು ನಾಥೂರಾಮ್​ ಗೋಡ್ಸೆ. ನಾನು ಮಹಾತ್ಮಾ ಗಾಂಧಿಯ ಮೊಮ್ಮಗನಾಗಿ ಆ ಹತ್ಯೆಗೆ ನ್ಯಾಯ ಕೇಳಲು ಇಲ್ಲಿಗೆ ಬಂದಿದ್ದೇನೆ” ಎಂದಿದ್ದರು. ನಂತರ ಈ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು.
SCROLL FOR NEXT