ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ರಾಜಕೀಯ ಪಕ್ಷದ ಕಾರ್ಯಕರ್ತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನಲ್ಲಿ ಈ ಘಟನೆ ನಡೆದಿದ್ದು, ಮೃತ ಕಾರ್ಯಕರ್ತನನ್ನು ಮೊಹಮದ್ ಜಮಾಲ್ ಎಂದು ಗುರುತಿಸಲಾಗಿದೆ. ಕುಲ್ಗಾಮ್ ಜಿಲ್ಲೆಯ ಝಂಗಾಲ್ ಪೋರಾ ಗ್ರಾಮದಲ್ಲಿ ಕಾರ್ಯ ನಿರತನಾಗಿದ್ದ ಝಮಾಲ್ ನನ್ನು ಬೈಕ್ ನಲ್ಲಿ ಬಂದ ಉಗ್ರರು ಗುಂಡಿಟ್ಟು ಪರಾರಿಯಾಗಿದ್ದಾರೆ.
ಕೂಡಲೇ ಸ್ಥಳೀಯರು ಝಮಾಲ್ ನನ್ನು ಆಸ್ಪತ್ರೆ ಸೇರಿಸಿದರಾದರೂ, ಅಷ್ಟು ಹೊತ್ತಿಗಾಗಲೇ ಝಮಾಲ್ ಸಾವನ್ನಪ್ಪಿದ್ದ ಎಂದು ತಿಳಿದುಬಂದಿದೆ. ಮೃತ ಝಲಾಲ್ ಪಿಡಿಪಿ ಕಾರ್ಯಕರ್ತ ಎನ್ನಲಾಗಿದೆ.
ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಒಮರ್ ಅಬ್ದುಲ್ಲಾ, ಸರಣಿ ಹತ್ಯೆಗೆ ಮತ್ತೊಂದು ಬಲಿಯಾಗಿದ್ದು, ಘಟನೆಯನ್ನು ಕಟು ಶಬ್ಧಗಳಿಂದ ಖಂಡಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics