ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಹುದ್ದೆಗೆ ಕೇಂದ್ರ ಸರ್ಕಾರ 4 ನ್ಯಾಯಮೂರ್ತಿಗಳ ಹೆಸರನ್ನು ಅಂತಿಮಗೊಳಿಸಿದೆ.
ಬಡ್ತಿ ಆದೇಶ ಅಧಿಕೃತವಾಗಿ ಪ್ರಕಟವಾದ ನಂತರ ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರ ಸಂಖ್ಯೆ 31 ಕ್ಕೆ ಏರಿಕೆಯಾಗಲಿದೆ. ಈಗ ಒಟ್ಟಾರೆ 27 ಜನ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿದ್ದಾರೆ.
ನ್ಯಾ.ಅನಿರುದ್ಧ ಬೋಸ್, ನ್ಯಾ. ಎಎಸ್ ಬೋಪಣ್ಣ, ನ್ಯಾ.ಬಿಆರ್ ಗವಾಯಿ, ನ್ಯಾ.ಸೂರ್ಯಕಾಂತ್ ಅವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ಪಡೆಯಲಿದ್ದಾರೆ.