ದೇಶ

ಸೂರತ್: ಕೋಚಿಂಗ್ ಸೆಂಟರ್ ನಲ್ಲಿ ಭಾರಿ ಅಗ್ನಿ ಅವಘಡ, 15 ವಿದ್ಯಾರ್ಥಿಗಳು ಸಾವು

Lingaraj Badiger
ಸೂರತ್: ಗುಜರಾತ್ ನ ಸೂರತ್ ನಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ವೊಂದರ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಶುಕ್ರವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 15 ವಿದ್ಯಾರ್ಥಿಗಳ ಮೃತಪಟ್ಟಿದ್ದಾರೆ ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಮಧ್ಯಾಹ್ನ ಶಾರ್ಟ್‌ ಸರ್ಕೀಟ್‌ನಿಂದ ಕೋಚಿಂಗ್ ಸೆಂಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಮಾತ್ರದಲ್ಲಿ ಎಲ್ಲೆಡೆ ವ್ಯಾಪಿಸಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. 
ಸ್ಥಳಕ್ಕೆ 16 ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಕಟ್ಟಡದಲ್ಲಿದ್ದ 50ಕ್ಕೂ ಹೆಚ್ಚು ಮಕ್ಕಳನ್ನು ರಕ್ಷಿಸಲಾಗಿದೆ. ಅಲ್ಲದೆ ಕಟ್ಟಡದಲ್ಲಿ ಇನ್ನೂ ಹಲವರು ಸಿಲುಕಿಕೊಂಡಿರುವ ಸಾಧ್ಯತೆ ಇದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.
ಬೆಂಕಿಯ ಕೆನ್ನಾಲಗೆಯಿಂದ ತಪ್ಪಿಸಿಕೊಳ್ಳಲು ಹಲವರು ಕಟ್ಟಡದ ಮೇಲ್ಛಾವಣಿಯಿಂದ ಹಾರಿದ್ದು, ಈ ದೃಶ್ಯಗಳು ಭೀತಿ ಹುಟ್ಟಿಸುವಂತಿದೆ.
ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಈ ಘಟನೆಯಿಂದ ನನಗೆ ಬಹಳ ದುಃಖವಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.
SCROLL FOR NEXT