ದೇಶ

ಇಂದು ಸಂಜೆ ಕೇಂದ್ರ ಸಂಪುಟ ಸಭೆ, 16ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು

Lingaraj Badiger
ನವದೆಹಲಿ: ಭರ್ಜರಿ ಬಹುಮತದೊಂದಿಗೆ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸಂಜೆ ಸಚಿವ ಸಂಪುಟ ಸಭೆ ಕರೆದಿದ್ದು, 16ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು ಮಾಡಲಿದ್ದಾರೆ.
ಇಂದು ಸಂಜೆ ನಡೆಯುವ ಸಂಪುಟ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸುವ ದಿನ ಹಾಗೂ ಸ್ಥಳದ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.
ಜೂನ್ 3ಕ್ಕೆ 16ನೇ ಲೋಕಸಭೆಯ ಅವಧಿ ಕೊನೆಗೊಳ್ಳುವ ಹಿನ್ನೆಲೆಯಲ್ಲಿ ಲೋಕಸಭೆ ವಿಸರ್ಜನೆ ಮಾಡುವಂತೆ ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಶಿಫಾರಸು ಮಾಡಲಿದೆ.
ರಾಷ್ಟ್ರಪತಿಗಳು ಶಿಫಾರಸ್ಸನ್ನು ಅಂಗೀಕರಿಸಿ ಹಾಲಿ ಲೋಕಸಭೆಯನ್ನು ವಿಸರ್ಜಿಸಿ, ಹೊಸ ಸರ್ಕಾರ ರಚನೆಗೆ ಆಹ್ವಾನ ನೀಡಲಿದ್ದಾರೆ. ಜೂನ್ 3ಕ್ಕೂ ಮೊದಲು 17ನೇ ಲೋಕಸಭೆ ರಚನೆಯಾಗಬೇಕಿದ್ದು, ಇದಕ್ಕಾಗಿ ಚುನಾವಣಾ ಆಯೋಗದ ಮೂವರು ಆಯುಕ್ತರು ಲೋಕಸಭೆಗೆ ಹೊಸದಾಗಿ ಆಯ್ಕೆಯಾಗಿರುವವರ ಪಟ್ಟಿಯನ್ನು ರಾಷ್ಟ್ರಪತಿಗೆ ಸಲ್ಲಿಸಲಿದ್ದಾರೆ.
SCROLL FOR NEXT