ಸಂಸತ್ ಭವನ 
ದೇಶ

ರಾಷ್ಟ್ರಪತಿ ಕೋವಿಂದ್ ಅವರಿಂದ 16ನೇ ಲೋಕಸಭೆ ವಿಸರ್ಜನೆ: ತಕ್ಷಣದಿಂದಲೇ ಜಾರಿ

ಲೋಕಸಭಾ ಚುನಾವಣೆ ಮುಗಿದ ನಂತರ ಹೊಸ ಸರ್ಕಾರ ರಚನೆಯ ಪ್ರಕ್ರಿಯೆಗಳು ನಡೆಯುತ್ತಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಕ್ಷಣದಿಂದಲೇ ಜಾರಿಗೆ ...

ನವದೆಹಲಿ: ಲೋಕಸಭಾ ಚುನಾವಣೆ ಮುಗಿದ ನಂತರ ಹೊಸ ಸರ್ಕಾರ ರಚನೆಯ ಪ್ರಕ್ರಿಯೆಗಳು ನಡೆಯುತ್ತಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್  ತಕ್ಷಣದಿಂದಲೇ ಜಾರಿಗೆ ಬರುವಂತ 16ನೇ ಲೋಕಸಭೆಯನ್ನು ವಿಸರ್ಜಿಸಿರುವುದಾಗಿ ರಾಷ್ಚ್ಪಪತಿ ಭವನ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ  16ನೇ ಲೋಕಸಭೆ ವಿಸರ್ಜನೆಗೆ ಕೇಂದ್ರ ಸಚಿವ ಸಂಪುಟ ನಿರ್ಣಯ ಅಂಗೀಕರಿಸಿತ್ತು. 
ಕೋವಿಂದ್ ಅವರು ಮೋದಿ ಸಂಪುಟ ಸಭೆಯ ನಿರ್ಣಯವನ್ನು ಅಂಗೀಕರಿಸಿ, ಲೋಕಸಭೆಯನ್ನು ವಿಸರ್ಜಿಸಿದ್ದಾರೆ. 
ಈ ರಾಜೀನಾಮೆಯನ್ನು ಅಂಗೀಕರಿಸಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್,  ಹೊಸ ಸರ್ಕಾರ ರಚನೆಯಾಗುವರೆಗೂ ನೀವೆ ಮುಂದುವರೆಯುವಂತೆ ಮೋದಿಗೆ ಸೂಚಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಮೂಲಗಳಿಂದ ತಿಳಿದುಬಂದಿದೆ.
ಮೇ 30 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎರಡನೇ ಬಾರಿಗೆ ಅಸ್ತಿತ್ವಕ್ಕೆ ಬರುವ ಸಾಧ್ಯತೆ ಇದೆ. ಈ ಮಧ್ಯೆ  ಮೇ 25 ರಂದು ಎನ್ ಡಿಎ ಸಭೆ ನಡೆಯಲಿದೆ. ಈ ಸಭೆಯಲ್ಲಿ  ಎನ್ ಡಿಎ ಮೈತ್ರಿಕೂಟದ ನೂತನ ಸಂಸದರು ಔಪಚಾರಿಕವಾಗಿ ಮೋದಿ ಅವರನ್ನು ನಾಯಕನಾಗಿ ಆಯ್ಕೆ ಮಾಡಲಿದ್ದಾರೆ ನಂತರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸರ್ಕಾರ ರಚನೆಗೆ ಮೋದಿ ಅವರನ್ನು ಆಹ್ವಾನಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT