ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ 
ದೇಶ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜೀನಾಮೆ ಅಂಗೀಕರಿಸದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

ಲೋಕಸಭಾ ಚುನಾವಣೆ 2019 ರ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಸಾಧನೆಗೆ ಹೊಣೆ ಹೊತ್ತಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜೀನಾಮೆಯನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ತಿರಸ್ಕರಿಸಿದೆ.

ನವದೆಹಲಿ: ಲೋಕಸಭಾ ಚುನಾವಣೆ 2019 ರ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಸಾಧನೆಗೆ ಹೊಣೆ ಹೊತ್ತಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜೀನಾಮೆಯನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ತಿರಸ್ಕರಿಸಿದೆ. 
ಮೇ.25 ರಂದು ನಡೆದ ನವದೆಹಲಿಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ರಾಹುಲ್ ಗಾಂಧಿ ರಾಜೀನಾಮೆಯನ್ನು ಅಂಗೀಕರಿಸಲು ಸಭೆ ನಿರಾಕರಿಸಿ, ಅವರೇ ಅಧ್ಯಕ್ಷರಾಗಿ ಮುಂದುವರೆಯಬೇಕೆಂಬ ನಿರ್ಣಯ ಅಂಗೀಕರಿಸಲಾಗಿದೆ ಎಂದು ಎಎನ್ಐ ವರದಿ ಪ್ರಕಟಿಸಿದೆ. 
ಸಭೆಯಲ್ಲಿ ಪಂಜಾಬ್ ಸಿಎಂ ಅಮರಿಂದರ್ ಸಿಂಗ್, ದೆಹಲಿ ಮಾಜಿ ಸಿಎಂ, ಕಾಂಗ್ರೆಸ್ ನಾಯಕಿ ಶೀಲಾ ದೀಕ್ಷಿತ್, ಗುಲಾಮ್ ನಬಿ ಆಜಾದ್ ಮುಂತಾದ ನಾಯಕರು ಭಾಗಿಯಾಗಿದ್ದರು. 
ಕಾಂಗ್ರೆಸ್  ಹಿರಿಯ ನಾಯಕರಾಗಿರುವ ಮಧ್ಯಪ್ರದೇಶದ ಸಿಎಂ ಕಮಲ್ ನಾಥ್ ಸಿಡಬ್ಲ್ಯೂಸಿ ಸಭೆಗೆ ಗೈರಾಗಿದ್ದದ್ದು ಅಚ್ಚರಿ ಮೂಡಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ