ದೇಶ

ಮಧ್ಯ ಪ್ರದೇಶ: ಗೋ ಸಾಗಟದ ವದಂತಿ, ಮಹಿಳೆ ಸೇರಿ ಮೂವರ ಮೇಲೆ ಹಲ್ಲೆ

Nagaraja AB

ಭೂಪಾಲ್ : ಮಧ್ಯ ಪ್ರದೇಶದ ಹಳ್ಳಿಯೊಂದರಲ್ಲಿ ಆಟೋರಿಕ್ಷಾವೊಂದರಲ್ಲಿ ಅಕ್ರಮವಾಗಿ ಗೋವನ್ನು ಸಾಗಟ ಮಾಡಲಾಗುತ್ತಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಗುಂಪೊಂದು ಮಹಿಳೆ ಸೇರಿ ಮೂವರ ಮೇಲೆ  ಮನಬಂದಂತೆ ಥಳಿಸಿರುವ ಘಟನೆ ನಡೆದಿದೆ.

ಈ ಘಟನೆ ನೋಡಿದ ಪ್ರತ್ಯಕ್ಷದರ್ಶಿಗಳು ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ವಿಡಿಯೋದಲ್ಲಿ ಮಹಿಳೆಯ ದೃಶ್ಯವೂ ಕಂಡುಬಂದಿದೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡಿರುವ ಗುಂಪೊಂದು ಚಪ್ಪಲಿಯಿಂದ ಆ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ಘಟನೆ ಸಂಬಂಧ ಭೂಪಾಲ್ ನಿಂದ 350 ಕಿಲೋ ಮೀಟರ್ ದೂರದಲ್ಲಿರುವ ಸಿಯೊನಿ ಸಿಟಿಯಲ್ಲಿ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರುಪಡಿಸಲಾಗಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಮೇ 22ರಂದು  ಇಬ್ಬರು ಪುರುಷರು ಹಾಗೂ ಒಬ್ಬ ಮಹಿಳೆ ಆಟೋ ರಿಕ್ಷಾವೊಂದರಲ್ಲಿ ತೆರಳುತ್ತಿರುವಾಗ ಅವರನ್ನು ಅಡ್ಡಗಟ್ಟಿದ ಗುಂಪೊಂದು ಅಕ್ರಮವಾಗಿ ಗೋ ಸಾಗಟ ಮಾಡಲಾಗುತ್ತಿದೆ ಎಂದು ಆರೋಪಿಸಿದೆ. ನಂತರ ಅವರ ಮೇಲೆ ಹಲ್ಲೆ ನಡೆಸಿರುವುದಾಗಿ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಈ ಘಟನೆಗೆ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಪ್ತಿ ತೀವ್ರವಾಗಿ ಖಂಡಿಸಿದ್ದು, ಅಮಾಯಕ ಮುಸ್ಲಿಂರನ್ನು ಥಳಿಸಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ವಿಶ್ವಾಸವಿದೆ ಎಂದು ಟ್ವೀಟ್ ಮಾಡಿದ್ದಾರೆ.

SCROLL FOR NEXT