ಅಶೋಕ್ ಚವಾಣ್ 
ದೇಶ

ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಅಶೋಕ್‌ ಚವಾಣ್‌ ರಾಜೀನಾಮೆ

ಲೋಕಸಭೆ ಚುನಾವಣೆಯ ಸೋಲಿನ ಹೊಣೆ ಹೊತ್ತು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಅಶೋಕ್‌ ಚವಾಣ್‌ ಅವರು...

ಮುಂಬೈ: ಲೋಕಸಭೆ ಚುನಾವಣೆಯ ಸೋಲಿನ ಹೊಣೆ ಹೊತ್ತು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಅಶೋಕ್‌ ಚವಾಣ್‌ ಅವರು ಭಾನುವಾರ ರಾಜೀನಾಮೆ ನೀಡಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್ ಚವಾಣ್ ಅವರು, ಚುನಾವಣೆ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ. ಶೀಘ್ರ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತೇನೆ ಎಂದರು.
ನಾನು ಈಗಾಗಲೇ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಈ ಕುರಿತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಅಶೋಕ್ ಚವಾಣ್ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ದೇಶವ್ಯಾಪಿಯಾಗಿ ಕಾಂಗ್ರೆಸ್‌ಗೆ ಈ ಬಾರಿ ಹಿನ್ನಡೆ ಉಂಟಾಗಿದ್ದು, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ – ಎನ್‌ಸಿಪಿ ಮೈತ್ರಿಯು ಧೂಳೀಪಟವಾಗಿತ್ತು.
2014ರಲ್ಲಿ ನಡೆದ ಚುನಾವಣೆಯಲ್ಲಿ ಕೇವಲ 2 ಸ್ಥಾನ ಪಡೆದ ಕಾಂಗ್ರೆಸ್‌ ಪ್ರಸಕ್ತ ಚುನಾವಣೆಯಲ್ಲಿ ಒಂದು ಸ್ಥಾನದಲ್ಲಿ ಮಾತ್ರ ಗೆಲುವು ಪಡೆಯಿತು. ಈ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್‌ನ ದಿಗ್ಗಜ ನಾಯಕರೆಲ್ಲ ಸೋಲು ಅನುಭವಿಸಿದ್ದರು. ಸ್ವತಃ ಅಶೋಕ್‌ ಚವಾಣ್‌ ಅವರು ನಾಂದೇಡ್‌ ಲೋಕಸಭೆ ಕ್ಷೇತ್ರದಿಂದ ಸೋಲು ಅನುಭವಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ