ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಸೋಲಿನಿಂದ ಕಂಗೆಟ್ಟ ಕಾಂಗ್ರೆಸ್: ರಾಜೀನಾಮೆಗೆ ರಾಹುಲ್ ಪಟ್ಟು, ಎರಡು ರಾಜ್ಯಗಳಲ್ಲಿ ಅತಂತ್ರ ಸ್ಥಿತಿ

ಲೋಕಸಭಾ ಚುನಾವಣೆಯ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜೀನಾಮೆ ನಿರ್ಧಾರಕ್ಕೆಅಂಟಿಕೊಂಡಿದ್ದು...

ರಾಹುಲ್ ಗಾಂಧಿ
Lingaraj Badiger
Updated On : 27 May 2019, 10:55 am
ನವದೆಹಲಿ: ಲೋಕಸಭಾ ಚುನಾವಣೆಯ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜೀನಾಮೆ ನಿರ್ಧಾರಕ್ಕೆಅಂಟಿಕೊಂಡಿದ್ದು, ಎಐಸಿಸಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡುವಂತೆ ಪಟ್ಟು ಹಿಡಿದ್ದಾರೆ. ಮತ್ತೊಂದು ಕಡೆ ಕರ್ನಾಟಕ ಮತ್ತು ರಾಜಸ್ಥಾನದಲ್ಲಿನ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರಗಳು ಅತಂತ್ರ ಸ್ಥಿತಿ ಎದುರಿಸುತ್ತಿವೆ.
ಈ ಮಧ್ಯೆ ಲೋಕಸಭೆ ಚುನಾವಣೆಯ ಸೋಲಿನ ನೈತಿನ ಹೊಣೆ ಹೊತ್ತು ಮೂರು ರಾಜ್ಯಗಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು, ದೇಶದ ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್ ಪಾಳೆಯದಲ್ಲಿ ತೀವ್ರ ಸಂಚಲನ ಉಂಟು ಮಾಡಿದೆ.
ಮೂಲಗಳ ಪ್ರಕಾರ, ರಾಹುಲ್ ಗಾಂಧಿ ಅವರು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಸುತಾರಾಂ ಒಪ್ಪುತ್ತಿಲ್ಲ. ಎಐಸಿಸಿಗೆ ಹೊಸ ಅಧ್ಯಕ್ಷರನ್ನು ಹುಡುಕಿ ಎಂದು ತಮ್ಮ ಆಪ್ತ ವರಿಷ್ಠ ನಾಯಕರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕಾಗಿ ಹೊಸ ಸಂಸದರ ಸಭೆ ನಡೆಸಲು ಕೂಡ ರಾಹುಲ್‌ ಗಾಂಧಿ ನಿರಾಕರಿಸಿದ್ದಾರೆ.

Advertisement

Advertisement

ರಾಹುಲ್ ಗಾಂಧಿ ಅವರು ಇಂದು ಪಕ್ಷದ ಹಿರಿಯ ನಾಯಕರಾದ ಅಹ್ಮದ್ ಪಟೇಲ್ ಮತ್ತು ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಯಾಗಿದ್ದು, ರಾಜೀನಾಮೆ ಹಿಂತೆಗೆದುಕೊಳ್ಳುವಂತೆ ಒತ್ತಾಯ ಮಾಡಬೇಡಿ. ನಾನು ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಪಕ್ಷದ ಅಧ್ಯಕ್ಷ ಸ್ಥಾನ ನೆಹರೂ ಕುಟುಂಬದ ಹೊರತಾಗಿರಬೇಕು ಎಂದು ರಾಹುಲ್ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪ್ರಿಯಾಂಕ ಗಾಂಧಿ ಹೆಸರನ್ನೂ ಪ್ರಸ್ತಾಪಿಸಬಾರದು ಎಂದು ರಾಹುಲ್ ಗಾಂಧಿ ಸ್ಪಷ್ಟವಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
ಈ ಮಧ್ಯೆ ರಾಹುಲ್‌ ಗಾಂಧಿ ಮನಸ್ಸು ಬದಲಿಸಲು ತಾಯಿ ಸೋನಿಯಾ ಗಾಂಧಿ ಹಾಗೂ ಸೋದರಿ ಪ್ರಿಯಾಂಕಾ ಗಾಂಧಿ ಯತ್ನಿಸುತ್ತಿದ್ದು, ಕೆಲವು ದಿನ ವಿಶ್ರಾಂತಿ ಪಡೆಯಲು ವಿದೇಶ ಪ್ರವಾಸ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸಲು ಮುಂದಾಗಿದ್ದಾರೆ. ಆದರೆ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಅವರ ನಿಲುವನ್ನು ಸರ್ವಾನುಮತದಿಂದ ತಿರಸ್ಕರಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement