ದೂರವಾಣಿ ಕರೆಯಲ್ಲಿ ಇಮ್ರಾನ್ ಪ್ರಸ್ತಾವನೆಗೆ ಮೋದಿ ಪ್ರತಿಕ್ರಿಯೆ ಏನಿತ್ತು ಗೊತ್ತೇ? 
ದೇಶ

ದೂರವಾಣಿ ಕರೆಯಲ್ಲಿ ಇಮ್ರಾನ್ ಪ್ರಸ್ತಾವನೆಗೆ ಮೋದಿ ಪ್ರತಿಕ್ರಿಯೆ ಏನಿತ್ತು ಗೊತ್ತೇ?

ಅಭೂತಪೂರ್ವ ಬಹುಮತದಿಂದ ಎರಡನೇ ಅವಧಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಆಯ್ಕೆಗೊಂಡಿರುವುದು ಇಡೀ ವಿಶ್ವವನ್ನೇ ಚಕಿತಗೊಳಿಸಿದೆ. ಈ ನಡುವೆ ವಿಶ್ವಸಮುದಾಯ ಭಾರತ-ಪಾಕಿಸ್ತಾನ ಸಂಬಂಧದ ಬಗ್ಗೆ

ನವದೆಹಲಿ: ಅಭೂತಪೂರ್ವ ಬಹುಮತದಿಂದ ಎರಡನೇ ಅವಧಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಆಯ್ಕೆಗೊಂಡಿರುವುದು ಇಡೀ ವಿಶ್ವವನ್ನೇ ಚಕಿತಗೊಳಿಸಿದೆ.  ಈ ನಡುವೆ ವಿಶ್ವಸಮುದಾಯ  ಭಾರತ-ಪಾಕಿಸ್ತಾನ ಸಂಬಂಧದ ಬಗ್ಗೆ ಮೋದಿ ನಡೆಯನ್ನು ಕುತೂಹಲದಿಂದ ನೋಡುತ್ತಿದೆ.
ಪ್ರಧಾನಿ ಮೋದಿ ಬಹುತಮತ ಪಡೆದು ಮತ್ತೊಮ್ಮೆ ಅಧಿಕಾರಕ್ಕೇರುವುದು ನಿಚ್ಚಳವಾಗುತ್ತಿದ್ದಂತೆಯೇ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮೋದಿಗೆ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದರು. ಈ ವೇಳೆ ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧದ ಬಗ್ಗೆ  ಇಮ್ರಾನ್ ಖಾನ್ ಪ್ರಸ್ತಾಪಿಸಿದ್ದಾರೆ.
ಇಮ್ರಾನ್ ಖಾನ್ ಪ್ರಸ್ತಾವನೆಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ವಿಶ್ವಾಸ ಇಡಬಹುದಾದ, ಭಯೋತ್ಪಾದಕ, ಹಿಂಸಾಚಾರ ಮುಕ್ತ ವಾತಾವರಣ ಉಭಯ ರಾಷ್ಟ್ರಗಳ ನಡುವಿನ ಪರಸ್ಪರ ಸಹಕಾರಕ್ಕೆ ಅಗತ್ಯವಿರುವ ಅಂಶಗಳು ಎಂದು ಹೇಳಿದ್ದಾರೆ. 
ವಿಶೇಷವೆಂದರೆ ಭಾರತ ಬಾಲಾಕೋಟ್ ವೈಮಾನಿಕ ದಾಳಿ ನಡೆಸಿದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಇಮ್ರಾನ್ ಖಾನ್ ದೂರವಾಣಿ ಮಾತುಕತೆ ನಡೆಸಿದ್ದಾರೆ. ಮೋದಿಗೆ ಅಭಿನಂದನೆ ಸಲ್ಲಿಸಲು ಕರೆ ಮಾಡಿದ್ದ ಇಮ್ರಾನ್ ಖಾನ್, ಭಾರತ-ಪಾಕ್ ನಡುವೆ ಶಾಂತಿ, ಸಹಕಾರದ ಮಾತುಗಳನ್ನು ಪ್ರಸ್ತಾಪಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT